ಬೆಳಗಾವಿ: ರಾಜಕೀಯ ಬದ್ಧವೈರಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಫುಲ್ ಆಕ್ಟೀವ್ ಆಗಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದಾರೆ.
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ (Belagavi) ಗ್ರಾಮೀಣ ಕ್ಷೇತ್ರದಲ್ಲಿ ಗೋಕಾಕ್ ಸಾಹುಕಾರ್ ಆಕ್ಟೀವ್ ಆಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಳೇ ದ್ವೇಷ ತೀರಿಸಿಕೊಳ್ಳಲು ಹೊಸ ಲೆಕ್ಕಾಚಾರವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದಾರೆ. ಮರಾಠಾ ಅಸ್ತ್ರ ಬಳಸಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಪ್ಲ್ಯಾನ್ ಹಾಕಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಜಿಲ್ಲಾ ಪಂಚಾಯತ್ ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದಾರೆ. ಇಂದು ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರ ಸಭೆ ನಡೆಸಿದ್ದು ವಾರದಲ್ಲಿ ಮೂರು ದಿನ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರೌಂಡ್ಸ್ ಹಾಕುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರಕ್ಕೆ ಹೋಗೋದಿಲ್ಲ: ಜೋಶಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮರಾಠಾ ಸಮುದಾಯದ ನಾಯಕರ ಜೊತೆ ನಿರಂತರ ಸಂಪರ್ಕ ಇಟ್ಟುಕೊಳ್ಳುತ್ತಿದ್ದು ಶತಾಯಗತಾಯ ಈ ಬಾರಿ ಚುನಾವಣೆಯಲ್ಲಿ ಲಕ್ಷೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ಮರಾಠಾ ಸಮುದಾಯ ಮುಖಂಡನನ್ನು ಬಿಜೆಪಿ ನಾಯಕರಿಗೆ ಪರಿಚಯ ಮಾಡುತ್ತಿದ್ದು ಹಿಂಡಲಗಾ ಗ್ರಾಮಪಂಚಾಯತ್ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಭೇಟಿ ಮಾಡಿಸಿದ್ದು ಜಿಲ್ಲಾ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿ ನಡೆ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಸಿದ್ರಾಮುಲ್ಲಾಖಾನ್‍ಗೆ ಪ್ರಿಯವಾಗಿದ್ದು ಟಿಪ್ಪು ಟೋಪಿ ಅದನ್ನೇ ನಾನು ಹೇಳಿದ್ದು: ಸಿ.ಟಿ.ರವಿ