Bengaluru CityDistrictsKarnatakaLatestMain Post

ಗಾಂಧಿನಗರ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಲಕ್ಷ್ಮೀಕಾಂತ್ ನೇಮಕ

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ವಕ್ತಾರರಾಗಿ ಲಕ್ಷ್ಮೀಕಾಂತ್ ಅವರನ್ನು ಮಾಜಿ ಕೆಪಿಸಿಸಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ಅವರು ನೇಮಕಾತಿ ಮಾಡಿ, ಆದೇಶ ಪತ್ರ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಕ್ತಾರ ಲಕ್ಷ್ಮೀಕಾಂತ್, ಕೆಪಿಸಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು, ಶಾಸಕ ದಿನೇಶ್ ಗುಂಡೂರಾವ್ ಅವರು ಬೆಂಗಳೂರುನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಅವರ ಸಹಕಾರದಿಂದ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಬೆಂಬಲದಿಂದ ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವಾ ಮನೋಭಾವನೆ, ನಿಷ್ಠೆಯಿಂದ ದುಡಿಯುತ್ತಿದ್ದೇನೆ ಎಂದರು. ಇದನ್ನೂ ಓದಿ: ಧನುಷ್ ತಮ್ಮ ಮಗ ಅಂತ ಕೋರ್ಟ್ ಮೆಟ್ಟಿಲೇರಿದ ವೃದ್ಧ ದಂಪತಿ: ನಟನಿಗೆ ಮದ್ರಾಸ್ ಕೋರ್ಟ್ ಸಮನ್ಸ್

ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ದುರಾಡಳಿತ ಮತ್ತು ಜನವಿರೋಧಿ ನೀತಿಯನ್ನ ಖಂಡಿಸಿ, ಜನಜಾಗೃತಿ, ಪ್ರತಿಭಟನೆಯನ್ನು ಸತತವಾಗಿ ಮಾಡಲಾಗುತ್ತಿದೆ. ಬಡವರ, ದೀನದಲಿತರ ಪರ ಕಾಂಗ್ರೆಸ್ ಪಕ್ಷ. ಜನರು ಬಿಜೆಪಿ ಆಡಳಿತ ಬಗ್ಗೆ ರೋಸಿಹೋಗಿದ್ದಾರೆ. 2023ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು.

ಗಾಂಧಿನಗರ ಯುವ ಕಾಂಗ್ರೆಸ್ ಮತ್ತು ವಿವಿಧ ಮಂಚೂಣಿ ಘಟಕಗಳ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

Leave a Reply

Your email address will not be published.

Back to top button