ಮುಂಬೈ: ವಿರೋಧ ಪಕ್ಷದ ನಾಯಕರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕೆ ಹೋಗುತ್ತಿಲ್ಲ. ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ (BJP) ಸೇರ್ಪಡೆಯಾಗುತ್ತಿದ್ದಾರೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ವಾಗ್ದಾಳಿ ನಡೆಸಿದ್ದಾರೆ.
2009 ರಿಂದ ಪ್ರತಿನಿಧಿಸುತ್ತಿರುವ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಹಿರಿಯ ರಾಜಕಾರಣಿ ಶರದ್ ಪವಾರ್ (Sharad Pawar) ಪುತ್ರಿ ಸುಪ್ರಿಯಾ ಸುಳೆ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. 1996 ರಿಂದ 2009ರ ವರೆಗೆ ಈ ಕ್ಷೇತ್ರದಲ್ಲಿ ಶರದ್ ಪವಾರ್ ಪ್ರತಿನಿಧಿಸಿದ್ದರು.
Advertisement
Advertisement
ಚುನಾವಣಾ ಪ್ರಚಾರ ಸಿದ್ಧತೆ ನಡೆಸುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ (Arvind Kejriwal) ಬಂಧನ ಪ್ರಕರಣದ ಕುರಿತು ಮಾತನಾಡುತ್ತಾ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ; ಬಿಜೆಪಿಗೆ ಅಡ್ಡಮತದಾನ ಮಾಡಿದ್ದ ನಾಲ್ವರು ಎಸ್‌ಪಿ ಶಾಸಕರಿಗೆ ‘ವೈ’ ಕೆಟಗರಿ ಭದ್ರತೆ
Advertisement
Advertisement
ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಬಿಜೆಪಿಗೆ ಹೋದವರು ಪ್ರೀತಿಯಿಂದಾಗಿ, ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕಾಗಲಿ ಹೋಗುತ್ತಿಲ್ಲ. ಭಾರತೀಯ ಚುನಾವಣಾ ಆಯೋಗ, ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಎಲ್ಲವೂ ಅವರ ಬಳಿಯೇ ಇದೆ. ಇವುಗಳನ್ನು ಬಳಸಿ ಬಿಜೆಪಿ ದಾಳಿ ಮಾಡಿಸುತ್ತಾರೆ ಅಂತಾ ಹೆದರಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇದೇ ಕಾರಣಕ್ಕಾಗಿ ಕಳೆದ ತಿಂಗಳು ಅಶೋಕ್ ಶಂಕರರಾವ್ ಚವ್ಹಾಣ್ ಅವರೂ ಬಿಜೆಪಿ ಸೇರಿದರು. ಬಿಜೆಪಿಯವರು ಎಲ್ಲಾ ಪಕ್ಷಗಳನ್ನು ಹೀಗೆ ಒಡೆಯುತ್ತಿದ್ದಾರೆ. ಇದು ರಾಜಕೀಯವಲ್ಲ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಈ ಬಾರಿ ಚುನಾವಣೆಯಲ್ಲಿ ಗೆಲ್ಲುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನನ್ನ ಕೆಲಸ ಜನರ ಮುಂದೆ ಇದೆ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪವೂ ಇಲ್ಲ. ಹಾಗಾಗಿ ಬಾರಾಮತಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್ – ಆದೇಶದಲ್ಲಿ ಏನಿದೆ?