ಹೈಕಮಾಂಡ್ ಹಂತದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಿಲ್ಲ: ಆರ್.ಬಿ.ತಿಮ್ಮಾಪುರ್

1 Min Read

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಹಂತದಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಚಿವ ಆರ್‌.ಬಿ.ತಿಮ್ಮಾಪುರ್ (R.B.Timmapur) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಹೇಳ್ತಿಲ್ಲ. ಮಾಧ್ಯಮಗಳು ಹೇಳ್ತಿವೆ. ಯತೀಂದ್ರ ‌ಹೇಳೋದು ಅವರ ಅಭಿಪ್ರಾಯ. ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಿಲ್ಲ ಎಂದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್

ಶಾಸಕರು ‌ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಮಲ್ಲಿಕಾರ್ಜುನ ಖರ್ಗೆ ಡೇಟ್ ಕೊಟ್ಟು ಕರೆಯುತ್ತೇನೆ ಅಂತ ಹೇಳಿದ್ದಾರೆ. ಆ ಡೇಟ್ ಇನ್ನು ಬಂದಿಲ್ಲ. ನಾಯಕತ್ವ ಬದಲಾವಣೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿಲ್ಲ ಎಂದು ತಿಳಿಸಿದರು.

Share This Article