ಚಂಡೀಗಢ: ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ (Chandigarh University) ಖಾಸಗಿ ವೀಡಿಯೋ (Private Video) ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭುಗಿಲೆದ್ದ ಪ್ರತಿಭಟನೆಯಿಂದಾಗಿ (Protest) ನಾಳೆಯಿಂದ ಎರಡು ದಿನಗಳ ಕಾಲ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಸೆಪ್ಟೆಂಬರ್ 19, 20 ರಂದು ರಜೆ ಘೋಷಿಸಲಾಗಿದ್ದು, ಪಾಠ-ಪ್ರವಚನಗಳನ್ನು ನಡೆಸದಂತೆ ಸೂಚಿಸಲಾಗಿದೆ. ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಘಟನೆಗೆ ನಿಖರ ಕಾರಣವನ್ನು ವರದಿ ಮಾಡುವಂತೆ ವಿಶ್ವವಿದ್ಯಾಲಯವು (University) ಸೂಚಿಸಿದೆ. ಉಳಿದಂತೆ ಅಗತ್ಯ ಸೇವೆಗಳು ಲಭ್ಯವಿರಲಿದೆ ಎಂದು ವಿವಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿ ತನ್ನ ಖಾಸಗಿ ವೀಡಿಯೋ ಮಾತ್ರ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ಲು – ವಿವಿ ಸ್ಪಷ್ಟನೆ
Advertisement
Advertisement
ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಕಾಲೇಜಿನಿಂದ (College Girls Students) ಹೊರಬಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪೊಲೀಸರಿಂದಲೂ (Police) ವಿದ್ಯಾರ್ಥಿಗಳ ಮೇಲೆ ಲಾಟಿ ಚಾರ್ಜ್ ನಡೆದಿದೆ. ಆದರೆ ಕಾಲೇಜಿಗೆ ರಜೆ ಘೋಷಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಜೊತೆಗೆ ವಿವರಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
Advertisement
Advertisement
ವಿವಿಯ ವಿದ್ಯಾರ್ಥಿ ಕಲ್ಯಾಣ ಸಮಿತಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದು, ವಿದ್ಯಾರ್ಥಿಗಳನ್ನು ಮಾತುಕತೆಗೆ ಆಹ್ವಾನಿಸಿದೆ. ಆದರೆ, ಉಪಕುಲಪತಿಗಳು ಬಹಿರಂಗವಾಗಿ ಚರ್ಚೆ ನಡೆಸುವುದಾಗಿದ್ದರೆ ಮಾತ್ರವೇ ಚರ್ಚೆಗೆ ನಾವು ಬರುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟುಹಿಡಿದಿದ್ದಾರೆ. ಇದನ್ನೂ ಓದಿ: ಜೊತೆಗಿದ್ದವಳಿಂದಲೇ 60 ವಿದ್ಯಾರ್ಥಿನಿಯರು ಸ್ನಾನ ಮಾಡ್ತಿರೋ ಖಾಸಗಿ ವೀಡಿಯೋ ಲೀಕ್ – ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ
#WATCH | So far in our investigation, we have found out that there is only one video of the accused herself. She has not recorded any other video of anyone else. Electronic devices and mobile phones have been taken into custody and will be sent for forensic examination: Mohali SP pic.twitter.com/wv5dKYzYCr
— ANI (@ANI) September 18, 2022
ಏನಿದು ಘಟನೆ?
ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಸೋರಿಕೆಯಾದ ಬೆನ್ನಲ್ಲೇ ಭಾರೀ ಪ್ರತಿಭಟನೆ ಬುಗಿಲೆದ್ದಿದ್ದು, ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ, ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಲಾಗಿದೆ.