ಸಿಡ್ನಿ: ಆಸ್ಟ್ರೇಲಿಯಾ ಸರ್ಕಾರ ವೀಸಾ ರದ್ದು ಮಾಡಿರುವುದರಿಂದ ಅತ್ಯಂತ ನಿರಾಶೆಗೊಂಡಿದ್ದೇನೆ. ಆದರೆ ಕೋರ್ಟ್‍ನ ಈ ತೀರ್ಪನ್ನು ನಾನು ಅನುಸರಿಸುತ್ತೇನೆ ಎಂದು ವಿಶ್ವದ ನಂ.1 ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್ ತಿಳಿಸಿದ್ದಾರೆ.
ಜೊಕೊವಿಕ್ ಲಸಿಕೆ ಪಡೆಯದ ಕಾರಣ ವೀಸಾವನ್ನು ಸರ್ಕಾರ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಜೊಕೊವಿಕ್ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಫೆಡರಲ್ ನ್ಯಾಯಾಲಯದ ಮೂವರು ನ್ಯಾಯಾಧೀಶರು ಆಸ್ಟ್ರೇಲಿಯಾ ಸರ್ಕಾರ ವಿಧಿಸಿದ್ದ ವೀಸಾ ರದ್ದತಿಯನ್ನು ಎತ್ತಿಹಿಡಿದ್ದಿದ್ದು, ಜೊಕೊವಿಕ್‍ನ ಅರ್ಜಿಯನ್ನು ತಿರಸ್ಕರಿಸಿದೆ.
Advertisement
Advertisement
ಈ ಕುರಿತು ಮಾತನಾಡಿದ ಅವರು, ನಾನು ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇನೆ. ವೀಸಾವನ್ನು ವಜಾಗೊಳಿಸಿರುವುದರಿಂದ ಆಸ್ಟ್ರೇಲಿಯಾದಿಂದ ನಿರ್ಗಮಿಸುತ್ತೇನೆ ಎಂದು ತಿಳಿಸಿದ್ದಾದ್ದಾರೆ. ಇದನ್ನೂ ಓದಿ: ನೊವಾಕ್ ಜೊಕೊವಿಕ್ ವೀಸಾ 2ನೇ ಬಾರಿ ರದ್ದು – 3 ವರ್ಷ ಆಸ್ಟ್ರೇಲಿಯಾಗೆ ಪ್ರವೇಶವಿಲ್ಲ
Advertisement
ಆಸ್ಟ್ರೇಲಿಯನ್ ಓಪನ್ ಟೆನಿಸ್ ಗ್ರ್ಯಾಂಡ್ ಸ್ಲಾಂ ಟೂರ್ನಿಯಲ್ಲಿ ಭಾಗವಹಿಸಲು ಜೊಕೊವಿಕ್ ಆಸ್ಟ್ರೇಲಿಯಾಗೆ ಬಂದಿಳಿದಿದ್ದರು. ಈ ವೇಳೆ ಕೋವಿಡ್ ನಿಯಮದ ಪ್ರಕಾರ ಲಸಿಕೆ ಪಡೆದಿರಬೇಕಿತ್ತು. ಆದರೆ ಹಾಲಿ ಚಾಂಪಿಯನ್ ನೊವಾಕ್ ಜೊಕೊವಿಕ್ ಲಸಿಕೆ ಪಡೆದಿರಲಿಲ್ಲ. ಹಾಗಾಗಿ ವಿಮಾನ ನಿಲ್ದಾಣದಲ್ಲಿ ಅವರ ವೀಸಾವನ್ನು ಆಸ್ಟ್ರೇಲಿಯಾ ಸರ್ಕಾರ ಮೊದಲ ಬಾರಿಗೆ ರದ್ದು ಪಡಿಸಿತ್ತು. ಇದನ್ನೂ ಓದಿ: ಕ್ಯಾಪ್ಟನ್ ಕಿಂಗ್ ಕೊಹ್ಲಿ ಯುಗಾಂತ್ಯ – ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು
Advertisement
ಆ ಬಳಿಕ ವೈದ್ಯಕೀಯ ಅನುಮತಿ ಪಡೆದು ಆಸ್ಟ್ರೇಲಿಯಾ ಪ್ರವೇಶಿಸಿದ್ದ ಜೊಕೊವಿಕ್‍ಗೆ ಮತ್ತೊಮ್ಮೆ ಹಿನ್ನಡೆಯಾಗಿತ್ತು. ಆಸ್ಟ್ರೇಲಿಯಾ ಸರ್ಕಾರ ಎರಡನೇ ಬಾರಿ ಜೊಕೊವಿಕ್ ವೀಸಾವನ್ನು ರದ್ದುಪಡಿಸಿ 3 ವರ್ಷಗಳವರೆಗೆ ಆಸ್ಟ್ರೇಲಿಯಾಕ್ಕೆ ಪ್ರವೇಶ ನಿಷೇಧಿಸಿದೆ.
ಆಸ್ಟ್ರೇಲಿಯಾಕ್ಕೆ ಬರುವವರಿಗೆ ಲಸಿಕೆ ಕಡ್ಡಾಯ ಮಾಡಲಾಗಿದೆ. ಲಸಿಕೆ ಪಡೆಯದವರಿಗೆ ವೀಸಾ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ಮೊದಲೇ ಪ್ರಕಟಿಸಿತ್ತು. ಹೀಗಿದ್ದರೂ ಜೊಕೊವಿಕ್ ಆಸ್ಟ್ರೇಲಿಯಾದ ವೀಸಾ ಸಿಕ್ಕಿತ್ತು. ಈ ವಿಚಾರ ತಿಳಿದ ಆಸ್ಟ್ರೇಲಿಯಾದ ಜನತೆ ಬಡವರಿಗೆ ಒಂದು ನಿಯಮ, ಶ್ರೀಮಂತರಿಗೆ ಒಂದು ನಿಯಮ. ಇದು ಎಷ್ಟು ಸರಿ ಎಂದು ಖಾರವಾಗಿ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಸರ್ಕಾರ ವೀಸಾವನ್ನೇ ರದ್ದು ಮಾಡಿತ್ತು.