ಬೆಂಗಳೂರು: 2028ರ ವಿಧಾನಸಭೆ ಚುನಾವಣೆಗೆ (2028 Assembly Elections) ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಮರೆತು ಸ್ಥಳೀಯವಾಗಿ ನಾಯಕರ ಜೊತೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಾರ್ಯಕರ್ತರು, ಮುಖಂಡರಿಗೆ ಕರೆ ನೀಡಿದ್ದಾರೆ.
ಜಗದೀಶ್ ಶೆಟ್ಟರ್ ಅವರಿಂದ ತೆರವಾಗಿದ್ದ ವಿಧಾನ ಸಭೆ, ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆಯಾಗಿದ್ದ ನೂತನ ಸದಸ್ಯ ಬಸನಗೌಡ ಬಾದರ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಕೆಶಿ, ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವಂತೆ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ವಿಧಾನಸೌಧದ ಮುಂದೆ ಇದ್ದ ಫ್ಲೆಕ್ಸ್ ನೋಡಿ ನಲಪಾಡ್‌ಗೆ ಡಿಕೆಶಿ ವಾರ್ನಿಂಗ್
Advertisement
Advertisement
ಕಾರ್ಯಕ್ರಮದ ಬಳಿಕ ಮಾತನಾಡಿದ ಡಿಕೆಶಿ, ಬಹಳ ವರ್ಷಗಳಿಂದ ಪಕ್ಷಕ್ಕಾಗಿ ದುಡಿದವರಿಗೆ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಾವೆಲ್ಲ ಮಾತಾಡಿ, ಬಹಳ ಒತ್ತಡ ಹೇರಿ ಈ ಸ್ಥಾನ ಬಾದರ್ಲಿಗೆ ಕೊಡಲಾಗಿದೆ. ಪಕ್ಷಕ್ಕೆ ದೊಡ್ಡ ಆಸ್ತಿ ಆಗಬೇಕು. ಎಲ್ಲಾ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ನೀವೆಲ್ಲ ಲೋಕಲ್‌ನಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಹೊಂದಾಣಿಕೆ ಮಾಡಿಕೊಂಡು 2028ರ ಚುನಾವಣೆಯ ಗುರಿ ಇಟ್ಟುಕೊಳ್ಳಬೇಕು. ಈಗ ಎಷ್ಟು ಸ್ಥಾನ ಇದೆಯೋ ಅದಕ್ಕಿಂತ ಹೆಚ್ಚು ಸ್ಥಾನ ಪಡೆಯಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಎಷ್ಟು ಸ್ಥಾನ ಪಡೆಯುತ್ತೇವೆ ಎಂಬುದರ ಮೇಲೆ ನಿಮ್ಮ ಭವಿಷ್ಯ, ಪಕ್ಷದ ಭವಿಷ್ಯ ನಿಂತಿದೆ. 2028ರ ಚುನಾವಣೆಗೆ ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ
Advertisement