ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು (Cremation) ಅವರ ನೆಚ್ಚಿನ ತೋಟದಲ್ಲಿ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ನೆಲಮಂಗಲ ಸಮೀಪದ ಸೋಲದೇವನಹಳ್ಳಿ (Soladevanahalli) ತೋಟದಲ್ಲಿ ಲೀಲಾವತಿ ಅವರ ಅಂತಿಮ ಸಂಸ್ಕಾರ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Advertisement
ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ‘ಇಂದು ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಮಧ್ಯಾನ್ಹ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸೆಪೆಕ್ಟರ್ಸ್ ಹೆಚ್ಚುವರಿಯಾಗಿ ಕೆಎಸ್ಆರ್ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.
Advertisement
Advertisement
ಲೀಲಾವತಿ ಅವರು ಅಂತಿಮ ದರ್ಶನಕ್ಕೆ ಇಪ್ಪತ್ತು ಸಾವಿರದಷ್ಟು ಜನರು ಬರುವ ಸಾಧ್ಯತೆ ಇದ್ದು, ಅದರಂತೆ ಸಾರ್ವಜನಿಕ ದರ್ಶನಕ್ಕೆ ಬರುವವರಿಗೆ ಯಾವುದೇ ರೀತಿಯಾಗಿ ಅಡೆತಡೆಗಳು ಆಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆಯಂತೆ. ವಿವಿಐಪಿಗಳಿಗೆ ಹಾಗೂ ಸಿನಿಮಾ ನಟ ನಟಿಯರಿಗೆ ದರ್ಶನಕ್ಕಾಗಿ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
Advertisement
ಅವರ ದೇಹ ಬಳಲಿತ್ತು
ಸತತ ಎರಡು ತಿಂಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ವಾರದ ಹಿಂದೆಯಷ್ಟೇ ನಾನು ಅವರ ಮನೆಗೆ ಹೋಗಿದ್ದೆ. ಮಲಗಿದ್ದಲ್ಲೇ ಮಲಗಿದ್ದರಿಂದ ಬೆನ್ನಿನಲ್ಲಿ ನೋವಿತ್ತು. ಹಾಗಾಗಿ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿಸೋದು ಕಷ್ಟವಾಗಿಲ್ಲ. ಮನೆಯಲ್ಲೇ ಟ್ರೀಟ್ ಮೆಂಟ್ ಕೊಡಲು ಮುಂದಾದೆವು ಎಂದರು ಡಾ.ವಿಕಾಸ್.
ಮುಂದುವರೆದು ಮಾತನಾಡಿದ ಡಾ.ವಿಕಾಸ್, ‘ಲೀಲಾವತಿ ಅವರ ದೇಹದಲ್ಲಿ ಪ್ರೊಟಿನ್ ಕಡಿಮೆ ಇತ್ತು. ಉಪ್ಪಿನಾಂಶ ಕೂಡ ತೀರಾ ಕಡಿಮೆ ಆಗಿತ್ತು. ಹೊಟ್ಟೆಗೆ ಡೈರೆಕ್ಟ್ ಆಗಿ ಅವರಿಗೆ ಆಹಾರವನ್ನು ಕೊಡುವಂತಹ ವ್ಯವಸ್ಥೆ ಮಾಡಲಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ವಯಸ್ಸಿನ ಕಾರಣದಿಂದಾಗಿ ಅವರ ದೇಹ ಚಿಕಿತ್ಸೆಗೆ ಬೇಗ ಬೇಗ ಸ್ಪಂದಿಸುತ್ತಿರಲಿಲ್ಲ ಎಂದಿದ್ದಾರೆ.
ಸತತ ಎರಡು ತಿಂಗಳಿಂದ ನಟಿ ಲೀಲಾವತಿ (Leelavati) ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಡಾ.ವಿಕಾಸ್ (Dr.Vikas), ನಟಿಗೆ ಚಿಕಿತ್ಸೆ ನೀಡಿದ ವಿವರವನ್ನು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಲೀಲಾವತಿ ಅವರಿಗೆ ಏನೆಲ್ಲ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನುವ ವಿವರವನ್ನೂ ಅವರು ನೀಡಿದ್ದಾರೆ.