ಲೀಲಾವತಿ (Leelavati) ಅವರು ಬಹಳಷ್ಟು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ನಿರ್ಮಾಪಕಿಯಾಗಿ, ನಟಿಯಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಿನಿಮಾಗೆ ಬಂದವರು ಲೀಲಾವತಿ ಅವರು. ಆನಂತರ ದೊಡ್ಡ ರೀತಿಯಲ್ಲಿ ನಾಯಕಿ ನಟಿಯಾಗಿ ಬೆಳೆದರು. ಸಾಕಷ್ಟು ಸಿನಿಮಾಗಳನ್ನು ಕೊಟ್ಟವರು. ಅಂತಹ ಕಲಾವಿದರು ನಮ್ಮೊಂದಿಗೆ ಇದ್ದರು ಎನ್ನೋದೇ ಹೆಮ್ಮೆ ಅನಿಸುತ್ತಿದೆ ಎನ್ನುವುದು ನಟಿ ಉಮಾಶ್ರೀ (Umashree) ಮಾತು.
Advertisement
ಲೀಲಾವತಿ ಅವರದ್ದು ಮಾದರಿ ಜೀವನ. ಆ ತಾಯಿ ಸಾಕಷ್ಟು ಕಷ್ಟ ಪಟ್ಟಿದ್ಧಾರೆ. ಸನ್ಮಾನ, ಅವಮಾನ ಎರಡನ್ನೂ ಪಡೆದಿದ್ದಾರೆ. ತಾಯಿ ಮತ್ತು ಮಗನ ಬಾಂಧವ್ಯಕ್ಕೆ ಮಾದರಿ ಆದಂತಹ ಜೀವವದು. ಈಗ ತಾಯಿ ಮಗ ದೂರವಾಗಿದ್ದು ನೋವು ತಂದಿದೆ. ಅವರು ಇಲ್ಲ ಅನ್ನೋದು ನಂಬೋಕೆ ಆಗ್ತಿಲ್ಲ. ಮಹಿಳೆಯಾಗಿ ಸಮಾಜಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ ಲೀಲಮ್ಮ. ಅವರ ಹಾಕಿಟ್ಟ ದಾರಿ ನಮಗೆಲ್ಲ ಮಾದರಿಯಾಗಬೇಕು ಎಂದಿದ್ದಾರೆ ನಟಿ, ಮಾಜಿ ಸಚಿವೆ ಉಮಾಶ್ರೀ.
Advertisement
Advertisement
ಲೀಲಾವತಿ ಸಂಕ್ಷಿಪ್ತ ಪಯಣ
Advertisement
ಲೀಲಾವತಿ ಅವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಅವರು. ನಟನೆಯ ಮೇಲಿನ ಆಸಕ್ತಿಯಿಂದಾಗಿ ಚಿಕ್ಕವಯಸ್ಸಿನಲ್ಲೇ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು. ಮೈಸೂರಿನಿಂದ ವೃತ್ತಿ ಆರಂಭಿಸಿ, ಮದ್ರಾಸ್, ಬೆಂಗಳೂರು ಹೀಗೆ ಹಲವು ಕಡೆ ಪ್ರಯಾಣ ಮಾಡಿದ್ದಾರೆ. ಯಶಸ್ವಿ ನಟಿಯಾಗಿ ಬೆಳೆದಿದ್ದಾರೆ.
ಕನ್ನಡ ಸಿನಿಮಾ ರಂಗದ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟಿದ್ದ ಲೀಲಾವತಿ (Leelavati) ಅವರು, ಆನಂತರ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ನಟಿಸಿದವರು. ತಮಿಳು, ತೆಲುಗು, ಕನ್ನಡ, ಮಲೆಯಾಳಂ ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. 1949ರಲ್ಲಿ ತೆರೆ ಕಂಡ ಶಂಕರ್ ಸಿಂಗ್ ಅವರ ನಾಗಕನ್ನಿಕ ಇವರ ಮೊದಲ ಚಿತ್ರ. ಇದಕ್ಕೂ ಮೊದಲು ಲೀಲಾವತಿ ಅವರು ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು.
ಕಯಾದುವಿನ ಸಖಿ, ಭಕ್ತ ಪ್ರಹ್ಲಾದ ಸೇರಿದಂತೆ ಸಾಕಷ್ಟು ನಾಟಕಗಳಲ್ಲಿ ಇವರು ಅಭಿನಯಿಸಿದ್ದಾರೆ. ಸಿನಿಮಾ ರಂಗಕ್ಕೆ ಬಂದ ನಂತರ, ಭಕ್ತ ಕುಂಬಾರ ಮನೆ ಮೆಚ್ಚಿದ ಸೊಸೆ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿಕ್ಕಚಿಕ್ಕ ಪಾತ್ರಗಳನ್ನೇ ಮಾಡುತ್ತಾ ಬಂದಿದ್ದ ಲೀಲಾವತಿ ಅವರು, ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ಮಾಂಗಲ್ಯ ಯೋಗ. ನಂತರ ಡಾ.ರಾಜ್ ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ರಣಧೀರ ಕಂಠೀರವ ಸಿನಿಮಾದಲ್ಲಿ ನಟಿಸಿದರು.