– ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಹೈವೋಲ್ಟೇಜ್ ಸಭೆ
ನವದೆಹಲಿ: ಇತ್ತೀಚೆಗೆ ಛತ್ತೀಸ್‌ಗಢದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿನ ಬಸ್ತರ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದರತಾ ಪಡೆಗಳು 31 ನಕ್ಸಲರನ್ನು ಹತ್ಯೆ ಮಾಡಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ (Amit Shah) ಸಭೆ ನಡೆಸಿದ್ದಾರೆ. ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
- Advertisement -
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಕ್ಸಲರು ದೇಶದ ಅಭಿವೃದ್ದಿಗೆ ಬಹು ದೊಡ್ಡ ತೊಡಕಾಗಿದ್ದಾರೆ. ನಕ್ಸಲರ ವಿರುದ್ಧ ಭದ್ರತಾ ಪಡೆಗಳು ಹಿಂದಿನ ರಕ್ಷಣಾತ್ಮಕ ಕಾರ್ಯಾಚರಣೆ ಬದಲಿಗೆ ಆಕ್ರಮಣಕಾರಿ ಕಾರ್ಯಾಚರಣೆ ನಡೆಸುತ್ತಿದ್ದು ಯಶಸ್ಸು ಪಡೆದಿದೆ ಎಂದರು. ಇದನ್ನೂ ಓದಿ: ಹಾಸನಕ್ಕೆ ರೈಲುಗಳಲ್ಲಿ ಮಾದಕ ವಸ್ತು ಸರಬರಾಜು – ಅಧಿಕಾರಿಗಳಿಗೆ ಶ್ರೇಯಸ್ ಪಟೇಲ್ ಕ್ಲಾಸ್
- Advertisement -
- Advertisement -
ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಮಹಾರಾಷ್ಟ್ರ, ಜಾರ್ಖಂಡ್, ಬಿಹಾರ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶ ಈ ಇವಿಷ್ಟೂ ರಾಜ್ಯಗಳು ನಕ್ಸಲ್ ಪೀಡಿತ ರಾಜ್ಯಗಳಾಗಿವೆ. ಪ್ರಧಾನಿ ಮೋದಿ ಸರ್ಕಾರದ ಕಾರ್ಯಾಚರಣೆಯಿಂದ ಎಡಪಂಥೀಯ ಉಗ್ರಗಾಮಿ ಹಿಂಸಾಚಾರವು ಶೇ. 72 ರಷ್ಟು ಕಡಿಮೆಯಾಗಿದೆ. 2010ಕ್ಕೆ ಹೋಲಿಕೆ ಮಾಡಿದರೆ 2023 ರಲ್ಲಿ ಸಾವಿನ ಸಂಖ್ಯೆ ಶೇ.86ರಷ್ಟು ಇಳಿಕೆಯಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಅವರು ತಿಳಿಸಿದ್ದಾರೆ. ಇದನ್ನೂ ಓದಿ: 8ನೇ ಬಾರಿ ಆರೋಪಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ- ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದುಕೊಳ್ಳಿ: ಪತಿಗೆ ಕಿವಿಮಾತು
- Advertisement -
ಮೋದಿಯವರ (Naredra Modi) ನೇತೃತ್ವದಲ್ಲಿ ಹಾಗೂ ಗೃಹ ಸಚಿವರ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರವು 2026ರ ಮಾರ್ಚ್ ವೇಳೆಗೆ ಎಲ್‌ಡಬ್ಲ್ಯೂಇಯ (LWE) ಬೆದರಿಕೆಯನ್ನು ಬೇರು ಸಮೇತ ಕಿತ್ತು ಹಾಕಲು ಬದ್ಧವಾಗಿದೆ ಎಂದು ಗೃಹಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇಲ್ಲಿಯವರೆಗೆ 230ಕ್ಕೂ ಹೆಚ್ಚು ನಕ್ಸಲರು ಹತರಾಗಿದ್ದಾರೆ. 723 ಜನ ಶರಣಾಗಿದ್ದಾರೆ ಮತ್ತು 812 ಮಂದಿಯನ್ನು ಬಂಧಿಸಲಾಗಿದೆ. ಈಗ ಕೇವಲ 38 ಜಿಲ್ಲೆಗಳು ನಕ್ಸಲ್ ಪೀಡಿತ ಜಿಲ್ಲೆಗಳಿವೆ. ಇದನ್ನೂ ಓದಿ: ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ – ಬೆಂಬಲಿಗರಿಂದ ಸಂಭ್ರಮಾಚರಣೆ
ನಕ್ಸಲ್ ಪೀಡಿತ ರಾಜ್ಯಗಳ ದೂರದ ಪ್ರದೇಶಗಳಿಗೆ 14,400 ಕಿಮೀ ಉದ್ದದ ರಸ್ತೆಯನ್ನು ನಿರ್ಮಿಸಲಾಗಿದ್ದು, ಸುಮಾರು 6,000 ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ