ಹುಬ್ಬಳ್ಳಿ: ಬಿಜೆಪಿಯ ಕೆಲ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎನ್ನುವ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪೂರಕವಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಾನು ಕಾಂಗ್ರೆಸ್ ಸೇರಲ್ಲ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.
Advertisement
ಬಿಜೆಪಿ ಪಕ್ಷದಿಂದ ಸಿಎಂ ಅಭ್ಯರ್ಥಿಯಾಗಿ ಬಿಂಬಿತವಾಗಿದ್ದ ಅರವಿಂದ್ ಬೆಲ್ಲದ್‍ಗೆ ಸಿಎಂ ಸ್ಥಾನ ಕೈತಪ್ಪಿ ಸಚಿವ ಸ್ಥಾನವೂ ಸಿಗದ ಪರಿಣಾಮ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಬೆಲ್ಲದ್, ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಸುಳ್ಳು ಸುದ್ದಿ. ನಾನು ಪಕ್ಷ ತೊರೆಯುತ್ತೆನೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವು ಇದ್ದೇವೆ. ಇಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿದ್ಧತೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಹಿಂದೊಮ್ಮೆ ಕಾಂಗ್ರೆಸ್ ಕದ ತಟ್ಟಿದ್ದರು: ವಿನಯ್ ಕುಮಾರ್ ಸೊರಕೆ
Advertisement
ಆತ್ಮೀಯರೇ.,
ಕೆಲ ಮಾಧ್ಯಮಗಳಲ್ಲಿ ನಾನು ಭಾರತೀಯ ಜನತಾ ಪಕ್ಷವನ್ನು ತೊರೆಯುವುದಕ್ಕೆ ಚಿಂತನೆ ನಡೆಸಿದ್ದೇನೆ ಎಂಬ ಸುಳ್ಳು ಹಾಗೂ ಕಪೋಲಕಲ್ಪಿತ ಸುದ್ದಿ ವರದಿಯಾಗುತ್ತಿದೆ. ಇದು ಸತ್ಯಕ್ಕೆ ದೂರವಾದ & ದುರುದ್ದೇಶಪೂರ್ವಕ ವರದಿ. ಸಾಮಾಜಿಕ ಜಾಲ ತಾಣಗಳಲ್ಲೂ ಇದೇ ಬಗೆಯ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. pic.twitter.com/FrfQi6puYY
— Arvind Bellad (@BelladArvind) September 20, 2021
Advertisement
ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ, ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತ, ಆರ್‌ಎಸ್‌ಎಸ್ ಸೇರಿ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದ್ದು, ನಾನೆಂದೂ ಭಾರತೀಯ ಜನತಾ ಪಕ್ಷವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲವೆಂದು ಅರವಿಂದ್ ಬೆಲ್ಲದ್ ತಮ್ಮ ನಿಲುವನ್ನು ಪ್ರಟಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ ಹಲವು ಶಾಸಕರು ಬಿಜೆಪಿಗೆ ಬರ್ತಾರೆ: ಬಿಎಸ್‍ವೈ
Advertisement