ಹುಬ್ಬಳ್ಳಿ: ವೈದ್ಯರ ಮೇಲೆ ರೋಗಿಗಳ ಸಂಬಂಧಿಕರು ಹಲ್ಲೆ ನಡೆಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ, ಧಾರವಾಡ ಪೊಲೀಸ್ ಕಮಿಷನರೇಟ್ ಲಾಬೂರಾಮ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ನಡೆಯುವ ಹಲ್ಲೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ನಗರದ ಖ್ಯಾತ ಮನೋರೋಗ ತಜ್ಞ ಡಾ. ವಿನೋದ್ ಕುಲಕರ್ಣಿ (ಪಿಐಎಲ್) ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವೈದ್ಯರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಇದನ್ನೂ ಓದಿ: ವೈದ್ಯರ ಮೇಲೆ ಹಲ್ಲೆ ಮಾಡಿದರೆ 10 ವರ್ಷ ಜೈಲು, 10 ಲಕ್ಷ ದಂಡ
ನಗರದ ಕಿಮ್ಸ್ ಸೇರಿ ಎಲ್ಲಾ ಆಸ್ಪತ್ರೆಗಳಲ್ಲಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ, ಕಂಟ್ರೋಲ್ ರೂಮ್ ನಂಬರ್ ಕಡ್ಡಾಯವಾಗಿ ಪ್ರಚಾರ ಪಡಿಸುವಂತೆ ನ್ಯಾಯಾಲಯ ಹೇಳಿತ್ತು. ಈ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಕಮಿಷನರೇಟ್, ಡಾ. ವಿನೋದ ಕುಲಕರ್ಣಿ ಅವರಿಗೆ ಪತ್ರ ಬರೆದು ವೈದ್ಯರಿಗೆ ತೊಂದರೆಯಾದಲ್ಲಿ ದೂರವಾಣಿ ಸಂಖ್ಯೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದರೆ ಕೂಡಲೇ ಸ್ಥಳಕ್ಕೆ ಆಗಮಿಸಿ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ತೀರ್ಥದಲ್ಲಿ ಕೈ ತೊಳೆದ ಕೇರಳದ ದೇವಸ್ವಂ ಸಚಿವ