ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಡುಪಿಯ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಇಯಾನ್ ಕಾರ್ ಪತ್ತೆ
Advertisement
Advertisement
ಕಾಳಿ ಸ್ವಾಮಿಗೆ ಕಾನೂನು ಕಂಟಕ ಎದುರಾಗಿದೆ. ಹಿಂದೂಗಳ ಒಂದು ತಲೆಗೆ ಮುಸ್ಲಿಮರ 10 ತಲೆ ತೆಗೀಬೇಕು ಅಂತಾ ಟೌನ್‌ಹಾಲ್‌ನಲ್ಲಿ ಕಾಳಿ ಸ್ವಾಮಿ ಹೇಳಿಕೆ ನೀಡಿದ್ದರು. ಇದಲ್ಲದೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಹೇಳಿಕೆ, ಬರಹ ಪೋಸ್ಟ್ ಮಾಡಿದ್ದರು. ಅಂತಹವರ ಮೇಲೂ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
Advertisement
Advertisement
ಇಂತಹ ಪ್ರಚೋದನಕಾರಿ ಹೇಳಿಕೆಗಳಿರುವ ಪೋಸ್ಟ್‌ಗಳನ್ನು ಪೊಲೀಸರು ಪಟ್ಟಿ ಮಾಡಿದ್ದಾರೆ. ಈಚೆಗೆ ಬಿಜೆಪಿ ಮುಖಂಡ ಪ್ರವೀಣ್ ಕೊಲೆ ಹಿನ್ನೆಲೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದವರ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ PFI ಕೈವಾಡ ಶಂಕೆ ವ್ಯಕ್ತಪಡಿಸಿದ ಕೇಂದ್ರ ಸಚಿವೆ ಶೋಭಾ