ಬೆಂಗಳೂರು: ಪಿಎಫ್‌ಐ (PFI) ಈಗ ಬ್ಯಾನ್ ಆದ ಸಂಘಟನೆ. ಆ ಸಂಘಟನೆ ಹೆಸರಲ್ಲಿ ಗುರುತಿಸಿಕೊಂಡರೆ ಅಂತಹವರ ಮೇಲೆ ಕಾನೂನು ಕ್ರಮ ಗ್ಯಾರಂಟಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸೂಚಿಸಿದಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ರಾಜ್ಯಗಳಿಗೆ ಕೇಂದ್ರ ಅಧಿಕಾರ ಕೊಟ್ಟಿದೆ. ರಾಜ್ಯಕ್ಕೆ ಅಧಿಕಾರ ಕೊಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆ ನಾವು ಮಾಡುತ್ತೇವೆ. ಮುಂದಿನ ಪ್ರಕ್ರಿಯೆಗಳು ಕಾನೂನು ಪ್ರಕಾರವೇ ಮಾಡುತ್ತೇವೆ ಎಂದು ತಿಳಿಸಿದರು.
Advertisement
Advertisement
ಪಿಎಫ್‌ಐ ಸೇರಿದಂತೆ 8 ಸಂಘಟನೆಗಳ ಬ್ಯಾನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಯಾವುದೇ ಗಲಾಟೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ಯಾನ್ ಅಯ್ತು ಮುಂದೆ PFI ಆಸ್ತಿ ಮುಟ್ಟುಗೋಲು – ರಾಜ್ಯ ಸರ್ಕಾರದ ತೀರ್ಮಾನ: ಆರಗ ಜ್ಞಾನೇಂದ್ರ
Advertisement
Advertisement
ಪಿಎಫ್‌ಐ ಈಗ ಬ್ಯಾನ್ ಆದ ಸಂಘಟನೆ. ಈ ಸಂಘಟನೆಯ ಹೆಸರಲ್ಲಿ ಯಾವುದೇ ಚಟುವಟಿಕೆ ಮಾಡುವ ಹಾಗೆ ಇಲ್ಲ. ಪ್ರತಿಭಟನೆ ಮಾಡುವ ಹಾಗೆ ಇಲ್ಲ. ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ ಗ್ಯಾರಂಟಿ. ಈಗಾಗಲೇ ಕೇಂದ್ರ ಸರ್ಕಾರ ಕೊಟ್ಟ ಆದೇಶದಂತೆ ನಾವು ಮುಂದಿನ ಕ್ರಮ ಪಾಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: PFI ಸಂಘಟನೆಗಳ ಆಸ್ತಿ ಬಗ್ಗೆ ಸರ್ವೆ ಕಾರ್ಯ ಆಗ್ತಿದೆ: ಆರಗ ಜ್ಞಾನೇಂದ್ರ