ಬೆಂಗಳೂರು: ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಕಳೆದ ಆರು ತಿಂಗಳುಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಜೋಶಿ, ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ರಕ್ತದೊತ್ತಡ, ಮಧುಮೇಹದ ರಾಜಧಾನಿಯಾಗುತ್ತಿದೆ ಭಾರತ – ಸುಧಾಕರ್ ಆತಂಕ
Advertisement
Advertisement
ಶೇ.7.5 ಕ್ಕೆ ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಶೇ.3 ರಷ್ಟು ಇರುವ ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸ್ವಾಮೀಜಿ ಅವರಿಗೆ ಭರವಸೆ ನೀಡಿದ್ದಾರೆ.
Advertisement
ಸ್ವಾಮೀಜಿಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಜೋಶಿ, ಪ್ರಸನ್ನಾನಂದ ಸ್ವಾಮೀಜಿ ಅವರ ಬೇಡಿಕೆಗಳನ್ನ ಆಲಿಸಿದರು. ನಾಗಮೋಹನ್ ದಾಸ್ ವರದಿ ಜಾರಿ ಕುರಿತ ಸ್ವಾಮೀಜಿ ಅವರ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸಚಿವರು, ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಸ್ವಾಮೀಜಿಯವರಿಗೆ ತಿಳಿಸಿದರು. ಇದನ್ನೂ ಓದಿ: ಮೊಟ್ಟೆ ಹೊಡೆದ ಸಂಪತ್ ಕಾಂಗ್ರೆಸ್‌ನವನಲ್ಲ – ಪಕ್ಕಾ RSS ಕಾರ್ಯಕರ್ತ: ಸಿದ್ದರಾಮಯ್ಯ
Advertisement
ಎಸ್‌ಟಿ ಮೀಸಲಾತಿ ಶೇ.3 ರಿಂದ ಶೇ.7.5 ರಷ್ಟು ಹೆಚ್ಚಿಸಲು ಕೆಲವು ಕಾನೂನಿನ ತೊಡಕಗಳು ಎದುರಾಗಲಿವೆ. ಕಾನೂನಿನ ಅಡ್ಡಿಗಳನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕಾರ ನೀಡುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಪ್ರಹ್ಲಾದ್ ಜೋಶಿ ಹೇಳಿದರು. ಧರಣಿ ಕೈ ಬಿಡುವಂತೆ ಪ್ರಸನ್ನಾನಂದ ಸ್ವಾಮೀಜಿ ಅವರಲ್ಲಿ ಈ ವೇಳೆ ಮನವಿ ಮಾಡಿದ್ದಾರೆ.