ಮುಂಬೈ: ಖ್ಯಾತಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.
ಜನವರಿ 8 ರಂದು ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಾಯಕಿಯನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅಲ್ಲಿ ಅವರು ಐಸಿಯುನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಗಾಯಕಿಯ ವಕ್ತಾರೆ ಅನುಷಾ ಶ್ರೀನಿವಾಸನ್ ಐಯ್ಯರ್ ಅವರು ಲತಾ ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಅವರು, ಲತಾ ದೀದಿ ಸದ್ಯ ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಪ್ರತಿ ಸಮದನಿ ಹಾಗೂ ಅವರ ತಂಡ ಚಿಕಿತ್ಸೆ ನೀಡುತ್ತಿದೆ. ಲತಾ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಲತಾ ಅವರ ಆರೋಗ್ಯದ ಬಗ್ಗೆ ಊಹಾಪೋಗಳು ಹರಿದಾಡಿತ್ತು. ದಿನದಿಂದ ದಿನಕ್ಕೆ ಗಾಯಕಿ ಆರೋಗ್ಯ ಕ್ಷೀಣಿಸುತ್ತಿದೆ ಎಂಬುದಾಗಿ ಹಬ್ಬಿತ್ತು. ಇದರಿಂದ ಸಿಟ್ಟಿಗೆದ್ದ ವಕ್ತಾರೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಸದ್ಯ ಲತಾ ಅವರ ಆರೋಗ್ಯ ಸುಧಾರಿಸುತ್ತಿದೆ ಎಂಬುದಾಗಿ ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ
ಇಂತಹ ಊಹಾಪೋಹಗಳಿಂದ ಲತಾ ಅವರ ಕುಟುಂಬಕ್ಕೆ ನೋವಾಗಿದೆ. ಲತಾ ದೀದಿ ಆರೋಗ್ಯ ಸುಧಾರಿಸುತ್ತಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ. ದಯಮಾಡಿ ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ. ಅಲ್ಲದೇ ವೈರಲ್ ಕೂಡ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದರು.