ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಸಭಾತ್ಯಾಗ ನಡೆಸಿದ್ದು, ಸದ್ಯ ಸಭಾಪತಿ ಆಯ್ಕೆ ವಿಚಾರದಲ್ಲಿ ಸದ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಮುಸುಕಿನ ಗುದ್ದಾಟ ಮುಂದುವರಿದಿದೆ.
ಸಭಾಪತಿ ಆಯ್ಕೆಗೆ ಬೇಕಾಗಿರುವ ಅಗತ್ಯ ಸಂಖ್ಯಾಬಲವನ್ನು ಕಾಂಗ್ರೆಸ್ ಹೊಂದಿದೆ. ಆದರೆ ಜೆಡಿಎಸ್‍ಗೆ ಸಭಾಪತಿ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿತ್ತು. ಹೀಗಾಗಿ ಪರಿಷತ್ ಸ್ಪೀಕರ್ ಸ್ಥಾನ ಜೆಡಿಎಸ್ ಹೋಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನಲ್ಲಿ ಭಾರೀ ಅಸಮಾಧಾನ ಕೇಳಿಬರುತ್ತಿದ್ದು, ಇದೇ ಕಾರಣಕ್ಕೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎನ್ನಲಾಗಿದೆ.
Advertisement
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಎಸ್.ಆರ್. ಪಾಟೀಲ್ ಪರವಾಗಿ ನಿಂತಿದ್ದು, ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟು ಕೊಡಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement
ಅಧಿವೇಶನ ಮುಗಿಯುದರ ಒಳಗೆ ಸಭಾಪತಿ ಚುನಾವಣೆ ನಡೆಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಈ ಕುರಿತು ಯಾವುದೇ ಮುನ್ಸೂಚನೆ ಇಲ್ಲದಾಗಿದೆ. ಇದು ಹಕ್ಕುಚ್ಯುತಿ ಆಗೋದಿಲ್ವೇ ಎಂದು ಬಿಜೆಪಿಯ ಅಯನೂರು ಮಂಜುನಾಥ್ ಪ್ರಶ್ನಿಸಿದ್ದಾರೆ.