ಕಾವೇರಿ (Cauvery) ನದಿ ನೀರಿನ ಹೋರಾಟ ಮತ್ತು ತಮಿಳು ಸಂಘಟನೆಗಳು ಕನ್ನಡ ಸಿನಿಮಾವನ್ನು ಬ್ಯಾನ್ ಮಾಡುವಂತಹ ಹೇಳಿಕೆಗಳ ಪರಿಣಾಮವಾಗಿ ‘ಲಿಯೋ’ ಸಿನಿಮಾ ಕನ್ನಡದಲ್ಲಿ(Karnataka) ಬಿಡುಗಡೆ ಆಗುತ್ತಾ ಎನ್ನುವ ಅನುಮಾನ ಶುರುವಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ನಟನೆಯ ಈ ಸಿನಿಮಾ ತನ್ನದೇ ಆದ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಆದರೆ, ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ತಮಿಳು ಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಹಲವರು ಆಗ್ರಹಿಸಿದ್ದಾರೆ. ಹೀಗಾಗಿ ಲಿಯೋ ಟೀಮ್ ಏನು ಮಾಡಲಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ.
Advertisement
ಕೇರಳದಲ್ಲಿ ಮತ್ತೊಂದು ರೀತಿಯ ಬಿಸಿ
Advertisement
ದಳಪತಿ ವಿಜಯ್ (Vijay) ನಟನೆಯ, ಬಹುನಿರೀಕ್ಷಿತ ‘ಲಿಯೋ’ (Leo) ಸಿನಿಮಾವನ್ನು ಬೈಕಾಟ್ (Boycott) ಮಾಡಬೇಕು ಎನ್ನುವ ಕೂಗು ಕೇರಳದಲ್ಲಿ (Kerala) ಕೇಳಿ ಬರುತ್ತಿದೆ. ಲಿಯೋ ಸಿನಿಮಾವನ್ನು ಬೈಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಬೇರೆ ಮಾಡಲಾಗುತ್ತಿದೆ. ಹೀಗಾಗಿ ಸಹಜವಾಗಿಯೇ ನಿರ್ಮಾಪಕರಿಗೆ ಆತಂಕ ಎದುರಾಗಿದೆ.
Advertisement
Advertisement
ತಮಿಳು ನಟ ವಿಜಯ್ ಮತ್ತು ಮಲಯಾಳಂ ನಟ ಮೋಹನ್ ಲಾಲ್ (Mohanlal) ಅಭಿಮಾನಿಗಳು ಯಾವಾಗಲೂ ಕಿತ್ತಾಡುತ್ತಿರುತ್ತಾರೆ. ಈ ಜೋಡಿ ನಟನೆಯ ‘ಜಿಲ್ಲಾ’ ಸಿನಿಮಾದ ಸಂದರ್ಭದಲ್ಲಿ ವಿಜಯ್ ಅಭಿಮಾನಿಯೊಬ್ಬ ಮೋಹನ್ ಲಾಲ್ ಅವರಿಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದ್ದ, ಅಲ್ಲಿಂದ ಈ ಇಬ್ಬರ ಫ್ಯಾನ್ಸ್ ವಾರ್ ಶುರುವಾಗಿತ್ತು. ವಿಜಯ್ ಸಿನಿಮಾ ರಿಲೀಸ್ ಗೆ ಬಂದಾಗೆಲ್ಲ ಬೈಕಾಟ್ ಕೂಗು ಕೇಳಿ ಬರುತ್ತದೆ.
‘ಲಿಯೋ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದ್ದು, ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹೀಗೆ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ಮಧ್ಯೆ, ಚಿತ್ರವನ್ನು ನಿರ್ಮಿಸುತ್ತಿರುವ 7 ಸ್ಕ್ರೀನ್ ಸ್ಟುಡಿಯೋ ಸಂಸ್ಥೆಯು, ಚಿತ್ರದ ಕನ್ನಡ ಪೋಸ್ಟರ್ ಬಿಡುಗಡೆ ಮಾಡಿದೆ.
ತಮಿಳಿನ ಜನಪ್ರಿಯ ನಿರ್ದೇಶಕರಾದ ಲೋಕೇಶ್ ಕನಕರಾಜ್ ನಿರ್ದೇಶಿಸಿರುವ ‘ಲಿಯೋ’ ಚಿತ್ರದಲ್ಲಿ ‘ಇಳಯದಳಪತಿ’ ವಿಜಯ್, ತ್ರಿಷಾ, ಸಂಜಯ್ ದತ್, ಅರ್ಜುನ್ ಸರ್ಜಾ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ‘ಲಿಯೋ’ ಚಿತ್ರವು ಒಂದು ಅದ್ಭುತ ಅನುಭವ ನೀಡುವ ಚಿತ್ರವಾಗಿ ರೂಪುಗೊಂಡಿದ್ದು, ಇದರಲ್ಲಿ ಆಕ್ಷನ್, ಡ್ರಾಮಾ, ಎಮೋಷನ್ ಸೇರಿದಂತೆ ಎಲ್ಲಾ ಭಾಷೆಯ ಮತ್ತು ಪ್ರದೇಶದ ಜನರನ್ನು ಆಕರ್ಷಿಸುವಂತಹ ಅಂಶಗಳಿವೆ.
ಇನ್ನು, ಚಿತ್ರದ ಕರ್ನಾಟಕ ವಿತರಣೆಯ ಹಕ್ಕುಗಳನ್ನು ಸ್ವಾಗತ್ ಎಂಟರ್ ಪ್ರೈಸಸ್ ಸಂಸ್ಥೆಯು ತನ್ನದಾಗಿಸಿಕೊಂಡಿದ್ದು, ಚಿತ್ರವನ್ನು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ. ‘ಲಿಯೋ’ ಚಿತ್ರವು ಅಕ್ಟೋಬರ್ 19ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
Web Stories