ಚಾಮರಾಜನಗರ: ನಗರದಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಎರಡು ದಿನಗಳ ಅಂತರದಲ್ಲಿ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.
Advertisement
ಬೋನಿಟ್ಟು ಚಿರತೆ ಸೆರೆ ಹಿಡಿಯದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಂಡೀಪುರ ಎಸಿಎಫ್ ಸುರೇಶ್ ವಿರುದ್ಧ ರೈತರು ಕಿಡಿಕಾರಿದ್ದಾರೆ.
Advertisement
ಸ್ಥಳಕ್ಕೆ ಎಸಿಎಫ್ ಸುರೇಶ್ ಭೇಟಿ ಕೊಟ್ಟಿದ್ದರು. ಕೂಡಲೇ ಚಿರತೆ ಸೆರೆ ಹಿಡಿಯಲು ರೈತರ ಆಗ್ರಹಿಸಿದ್ದಾರೆ.