ರಾಮನಗರ: ಜಿಲ್ಲೆಯಲ್ಲಿ ಚಿರತೆ (Leopard) ಹಾವಳಿ ಮುಂದುವರೆದಿದ್ದು, ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿರೋ ಘಟನೆ ಕನಕಪುರ (Kanakapura) ತಾಲೂಕಿನ ಅಳ್ಳಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೋರೇಗೌಡ ಎಂಬವರ ಮನೆ ಬಳಿ ಚಿರತೆ ಓಡಾಟ ನಡೆಸಿದ್ದು, ಸೋಮವಾರ ರಾತ್ರಿ ಮನೆಯ ಕಾಂಪೌಂಡ್ ಎಗರಿ ನಾಯಿ ಮೇಲೆ ದಾಳಿ ಮಾಡಿದೆ. ನಾಯಿ ಬೊಗಳುತ್ತಿದ್ದಂತೆ ಚಿರತೆ ಸ್ಥಳದಿಂದ ಕಾಲ್ಕಿತ್ತಿದೆ. ಇನ್ನೂ ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಕ್ರಿಸ್‌ಮಸ್ ಹಬ್ಬ – ಕೋಲಾರದ ಮೆಥೋಡಿಸ್ಟ್ ಚರ್ಚ್‌ನಲ್ಲಿ ದೀಪಾಲಂಕಾರ
Advertisement
Advertisement
ಚಿರತೆ ಪ್ರತ್ಯಕ್ಷಕ್ಕೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಕೂಡಲೇ ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಇನ್ನೂ ಅಕ್ಕಪಕ್ಕದ ಗ್ರಾಮದಲ್ಲೂ ಆಗಾಗ ಚಿರತೆಗಳು ನಾಯಿ, ಕೋಳಿಗಳನ್ನು ಹೊತ್ತೊಯ್ಯುತ್ತಿದ್ದರೂ ಅರಣ್ಯ ಇಲಾಖೆ ಈ ಬಗ್ಗೆ ಕ್ರಮವಹಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಹೋಟೆಲ್‌ಗೆ ಕರೆಸಿ ಪ್ರಿಯಕರನ ಮರ್ಮಾಂಗ ಕಟ್ ಮಾಡಿದ್ಳು ಪ್ರಿಯತಮೆ!
Advertisement