ಚಿಕ್ಕಮಗಳೂರು: ಚಿರತೆ (Leopard) ದಾಳಿಯಿಂದ 5 ವರ್ಷದ ಸಾವನ್ನಪ್ಪಿರುವುದು ಕಡೂರು (Kadur) ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ನಡೆದಿದೆ.
ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಮಗು ಚೀರಾಟ ಕೇಳಿ ಪೋಷಕರು ಬಂದಿದ್ದಾರೆ. ಅವರ ಎದರುರಲ್ಲೇ ಚಿರತೆ ಮಗುವನ್ನು ಕಾಡಿಗೆ ಹೊತ್ತೊಯ್ದಿದೆ. ಇದನ್ನೂ ಓದಿ: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಕಿರುಕುಳ ಕೇಸ್ – ಖಾಸಗಿ ಅಂಗ ಮುಟ್ಟಿ ಕೃತ್ಯ ಎಸಗಿದ್ದ ರೆಡಿಯಾಲಜಿಸ್ಟ್ ಅರೆಸ್ಟ್
ಸ್ಥಳಿಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 7 ಕೋಟಿ ದರೋಡೆ ಕೇಸ್ – ಪೊಲೀಸರ ಕಣ್ತಪ್ಪಿಸಲು ದರೋಡೆಕೋರರ ಮಾಸ್ಟರ್ ಪ್ಲ್ಯಾನ್, ವಾಟ್ಸಪ್ ಕಾಲ್‌ನಲ್ಲಿ ಮಾತ್ರ ಮಾತುಕತೆ!
ಚಿರತೆ ಹಾವಳಿಯಿಂದ ಹೊಲ, ಗದ್ದೆ, ತೋಟಗಳಿಗೆ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜಿಗೆ ಹೋಗುವ ಮಕ್ಕಳು ಆತಂಕದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಚಿರತೆಯನ್ನು ಸೆರೆ ಹಿಡಿಯಬೇಕು. ಮಗುವಿನ ಸಾವಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
