ಮೈಸೂರು: ಬೈಕ್‌ನಲ್ಲಿ (Bike) ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ (Leopard Attack) ನಡೆಸಿದ ಘಟನೆ ನಂಜನಗೂಡು (Nanjanagudu) ತಾಲೂಕಿನ ಚುಂಚನಹಳ್ಳಿ ಬಳಿ ನಡೆದಿದೆ.
ಚಿರತೆ ದಾಳಿಯಿಂದ ಬೈಕ್‌ನಲ್ಲಿದ್ದ ಮಗು ಹಾಗೂ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚುಂಚನಹಳ್ಳಿ ಗ್ರಾಮದ ಮಹದೇವಸ್ವಾಮಿ ಅವರ ಪತ್ನಿ ಹಾಗೂ ಮಗು ಗಂಭೀರ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ
ಗಾಯಾಳುಗಳಿಗೆ ಮೈಸೂರಿನ (Mysuru) ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ದಾಳಿ ನಡೆಸಿದ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಗೆ (Forest Department) ಆಗ್ರಹಿಸಿದ್ದಾರೆ. ಇದನ್ನೂ ಓದಿ: ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – ಮತ್ತೊಂದು ಮರಿ ಸೆರೆ, ಇನ್ನೊಂದು ಮಾತ್ರ ಬಾಕಿ

