ಹಾಸನ: ಕಳೆದ ಮೂರ್ನಾಲ್ಕು ತಿಂಗಳಿಂದ ಹೊಳೆನರಸೀಪುರದ (Holenarasipur) ಕೆಲವು ಗ್ರಾಮಗಳಲ್ಲಿ ಆತಂಕ ಮೂಡಿಸಿದ್ದ ಚಿರತೆ (Leopard) ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.
ಎರಡುವರೆ ವರ್ಷದ ಹೆಣ್ಣು ಚಿರತೆ ಇದಾಗಿದ್ದು, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಗ್ರಾಮಕ್ಕೆ ನುಗ್ಗಿ ಕುರಿ, ಸಾಕು ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕಿತ್ತು. ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು.
ಇತ್ತೀಚೆಗೆ ಹಗಲು ವೇಳೆ ರೈತರ ಜಮೀನಿನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಇದಾದ ಬಳಿಕ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಇದಾದ ಬಳಿಕ ಅರಣ್ಯ ಇಲಾಖೆ ಬೋನ್ ಅಳವಡಿಸಿತ್ತು.
ಬೋನಿನೊಳಗೆ ನಾಯಿ ಕಟ್ಟಲಾಗಿತ್ತು. ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.