ಚಾಮರಾಜನಗರ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 3-4 ವಯಸ್ಸಿನ ಗಂಡು ಚಿರತೆ ಸೆರೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಕ್ಕಲಪುರ ಗ್ರಾಮದಲ್ಲಿ ನಡೆದಿದೆ.
ಹಕ್ಕಲಪುರ ಗ್ರಾಮದ ಸತೀಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನನ್ನು ಇರಿಸಲಾಗಿತ್ತು. ಮೂರರಿಂದ ನಾಲ್ಕು ವರ್ಷದ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದೆ. ಇದರಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
Advertisement
ಹಕ್ಕಲಪುರ ಗ್ರಾಮದ ಸುತ್ತಮುತ್ತ ಚಿರತೆ ಉಪಟಳ ಹೆಚ್ಚಿ ಜಾನುವಾರು ಮತ್ತು ಮೇಕೆಗಳ ಮೇಲೆ ದಾಳಿ ಮಾಡಿ ಕೊಂದು ಹಾಕುತ್ತಿತ್ತು. ಇದರಿಂದ ರೈತರು ಭಯಬೀತರಾಗುವುದರ ಜೊತೆಗೆ ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು.
Advertisement
ಇದೀಗ ಚಿರತೆ ಬೋನಿಗೆ ಬಿದ್ದಿರುವುದು ರೈತರ ಆತಂಕ ದೂರವಾಗಿದೆ. ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಝೋನ್‌ನಲ್ಲಿ ಘಟನೆ ನಡೆದಿದೆ.