ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತಗ್ಗಲೂರಿನಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಜಾನುವಾರುಗಳ ಮೇಲೆ ದಾಳಿ ನಡೆಸಿ ಚಿರತೆ ಆತಂಕ ಮೂಡಿಸಿತ್ತು. ಕೊನೆಗೂ ಅರಣ್ಯ ಇಲಾಖೆಯಿರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.
ತಗ್ಗಲೂರು, ಭೋಗಯ್ಯನಹುಂಡಿ, ಕಾಳನಹುಂಡಿ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಚಿರತೆ ಉಪಟಳದಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
