ತುಮಕೂರು: ಇಲ್ಲಿನ ತುರುವೆಕೆರೆ (Turuvekere) ತಾಲೂಕು ತೊರೆಮಾವಿನಹಳ್ಳಿ (Toremavinahalli) ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಮನೆಯ ಮುಂದಿದ್ದ ನಾಯಿಯನ್ನು ಹೊತ್ತೊಯ್ದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಚಿರತೆ ಬಂದು ಹೋದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೆಲ ದಿನಗಳಿಂದ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದ ಚಿರತೆ ತಡರಾತ್ರಿ ತೊರೆಮಾವಿನಹಳ್ಳಿಯ ಶಂಕರಲಿಂಗಯ್ಯ ಎಂಬುವರ ಮನೆಯಂಗಳದಲ್ಲಿ ಕಾಣಿಸಿಕೊಂಡಿದೆ. ಈ ವೇಳೆ ಮನೆಯ ಆವರಣಕ್ಕೆ ನುಗ್ಗಿ ಮನೆ ಮುಂದಿದ್ದ ನಾಯಿಯನ್ನು ಹೊತ್ತೊಯ್ದಿದೆ. ಇದನ್ನೂ ಓದಿ: ಜನ ಸಾಮಾನ್ಯರ ಬಳಿ ಫಟಾಫಟ್ ವಸೂಲಿ – ಸರ್ಕಾರಿ ಇಲಾಖೆಗಳಿಂದಲೇ 8,000 ಕೋಟಿ ವಿದ್ಯುತ್ ಬಿಲ್ ಬಾಕಿ!
ಚಿರತೆ ಓಡಾಟದಿಂದ ಭಯಭೀತರಾಗಿರುವ ಗ್ರಾಮಸ್ಥರು, ರಾತ್ರಿ ವೇಳೆ ಮನೆಯಿಂದ ಹೊರ ಬರಲು ಆತಂಕಪಡುತ್ತಿದ್ದಾರೆ. ಇದನ್ನೂ ಓದಿ: ಭದ್ರತಾ ಖಾತ್ರಿಯಿಲ್ಲದೇ ಕದನ ವಿರಾಮ ಸಾಧ್ಯವಿಲ್ಲ – ಟ್ರಂಪ್‌ಗೆ ಝಲೆನ್ಸ್ಕಿ ಖಡಕ್ ಪ್ರತಿಕ್ರಿಯೆ
ಕೂಡಲೇ ಚಿರತೆಯನ್ನು ಸೆರೆಯಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಟ್ರಂಪ್-ಝೆಲೆನ್ಸ್ಕಿ ನಡ್ವೆ ಮಾತಿನ ಚಕಮಕಿಗೆ ಬೆಚ್ಚಿಬಿದ್ದ ವಿಶ್ವ – ನಿಮ್ಮಿಂದ 3ನೇ ಮಹಾಯುದ್ಧ ಎಂದ ಯುಎಸ್ ಅಧ್ಯಕ್ಷ