ಮಂಡ್ಯ: ಕಳೆದ 2 ತಿಂಗಳಿನಿಂದ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್‌ಎಸ್ ಡ್ಯಾಂ (KRS Dam) ಹಾಗೂ ಬೃಂದಾವನದ (Brindavana Garden) ಸುತ್ತಮುತ್ತ ಪದೇ ಪದೇ ಪ್ರತ್ಯಕ್ಷವಾಗುವ ಮೂಲಕ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ (Leopard) ಕೊನೆಗೂ ಬೋನಿಗೆ ಬಿದ್ದಿದೆ. ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕೆಆರ್‌ಎಸ್ ಡ್ಯಾಂ ಹಾಗೂ ಬೃಂದಾವನ ವ್ಯಾಪ್ತಿಯಲ್ಲಿ ಕಳೆದ 2 ತಿಂಗಳಿನಿಂದ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಇಲ್ಲಿನ ಜನರು, ಅಧಿಕಾರಿಗಳು ಹಾಗೂ ಪ್ರವಾಸಿಗರು ಆತಂಕಕ್ಕೆ ಒಳಾಗಿದ್ದರು. ಚಿರತೆಯಿಂದ ಯಾವುದೇ ತೊಂದರೆಯಾಗಬಾರದೆಂಬ ಕಾರಣಕ್ಕೆ ಕಾವೇರಿ ನೀರಾವರಿ ನಿಗಮ ಬೃಂದಾವನ ಗಾರ್ಡನ್‌ಗೆ ಪ್ರವಾಸಿಗರನ್ನು ನಿರ್ಬಂಧಿಸಿತ್ತು. ಇದಲ್ಲದೇ ಕೆಆರ್‌ಎಸ್ ಗ್ರಾಮದ ಜನರು ಜಮೀನಿಗೆ ತೆರಳಲು ಭಯ ಪಡುತ್ತಿದ್ದರು. ಇದನ್ನೂ ಓದಿ: ಟ್ರಕ್‍ನಲ್ಲಿ ಅಡಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Advertisement
Advertisement
ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಡ್ಯಾಂ ಹಾಗೂ ಬೃಂದಾವನ ವ್ಯಾಪ್ತಿಯಲ್ಲಿ 4 ಬೋನ್ ಇರಿಸಿ, ಬೋನ್‌ನಲ್ಲಿ ನಾಯಿಯನ್ನು ಕಟ್ಟಿ ಹಾಕಿದ್ದರು. ಕಳೆದ ರಾತ್ರಿ ಬೋನ್‌ನಲ್ಲಿ ಇದ್ದ ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿಗೆ ಬಿದ್ದಿದೆ.
Advertisement
ಚಿರತೆ ಬೋನಿಗೆ ಬಿದ್ದಿರುವ ಹಿನ್ನೆಲೆ ಜನರು, ಅಧಿಕಾರಿಗಳು ಹಾಗೂ ಪ್ರವಾಸಿಗರು ನಿಟ್ಟುಸಿರುವ ಬಿಡುವಂತಾಗಿದೆ. ಆದರೆ ಈ ಭಾಗದಲ್ಲಿ ಇನ್ನೊಂದು ಚಿರತೆ ಇರುವ ಅನುಮಾನವನ್ನು ಸ್ಥಳೀಯರು ವ್ಯಕ್ತಡಪಸಿದ್ದು, ಬೋನ್ ಅನ್ನು ಮತ್ತೆ ಇಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಿನಿ ಬಸ್, ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ – 12 ವಿದ್ಯಾರ್ಥಿಗಳಿಗೆ ಗಾಯ