DistrictsKarnatakaKodaguLatestMain Post

ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ

Advertisements

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿ ಹುಣಸೂರು ರಸ್ತೆಯಲ್ಲಿ ಚಿರತೆಯನ್ನು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.

ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಹೊಸಲು ಮಾರಮ್ಮ ದೇವಾಲಯದ ಬಳಿ ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ವಾಹನ ಚಾಲಕರು ಮತ್ತು ಗ್ರಾಮಸ್ಥರು ತಮ್ಮ ಮೊಬೈಲ್ ನಲ್ಲಿ ಚಿರತೆ ಓಡಾಡುತ್ತಿರುವುದನ್ನು ಸೆರೆ ಹಿಡಿದಿದ್ದಾರೆ.

ಚಿರತೆ ಹೋದ ಬಳಿಕವೇ ವಾಹನ ಸವಾರರು ಪ್ರಯಾಣ ಬೆಳೆಸಿದ್ದಾರೆ. ಚಿರತೆ ಕಾಣಿಸಿಕೊಂಡ ಪರಿಸರದಲ್ಲಿನ ನಿವಾಸಿಗಳು ಚಿರತೆ ಪ್ರತ್ಯಕ್ಷವಾಗಿದ್ದರಿಂದ ಭಯಗೊಂಡಿದ್ದಾರೆ.

Leave a Reply

Your email address will not be published.

Back to top button