ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ ಡ್ಯಾಂ (KRS Dam) ಬಳಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆ, ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಕೆಆರ್‌ಎಸ್ ಡ್ಯಾಂ ಬಳಿ ಅಲ್ಲಿನ ಸಿಬ್ಬಂದಿ ಗಿಡಗಂಟೆ ತೆರವುಗೊಳಿಸುವಾಗ ಚಿರತೆಯೊಂದು (Leopard) ಕಾಣಿಸಿಕೊಂಡಿದೆ. ಚಿರತೆ ಕಾಣಿಸಿಕೊಂಡಿರುವ ಕಾರಣ ನೀರಾವರಿ ನಿಗಮದ ಅಧಿಕಾರಿಗಳು ಆತಂಕದಲ್ಲಿದ್ದಾರೆ. ಚಿರತೆ ಪ್ರತ್ಯಕ್ಷವಾದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದು, ಮುಂಜಾಗೃತ ಕ್ರಮವಾಗಿ ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಎಇಇ ಫಾರೂಕ್ ಅಬು ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ
Advertisement
Advertisement
ಕೆಆರ್‌ಎಸ್ ಡ್ಯಾಂ ಬಳಿ ಇದು ಮೂರನೇ ಬಾರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಮೊದಲಿಗೆ ಬೃಂದಾವನ ಪಕ್ಕದ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಒಂದು ಚಿರತೆ ಸೆರೆ ಹಿಡಿದಿದ್ದರು.
Advertisement
Advertisement
ತಿಂಗಳ ಹಿಂದಷ್ಟೇ ಉತ್ತರ ಬೃಂದಾವನದ ಬಳಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಅರಣ್ಯ ಅಧಿಕಾರಿಗಳು ಬೋನ್ ಇಟ್ಟಿದ್ದರೂ ಸಹ ಚಿರತೆ ಸೆರೆಯಾಗಿಲ್ಲ. ಇದೀಗ 3ನೇ ಬಾರಿಗೆ ಚಿರತೆ ಕಾಣಿಸಿಕೊಂಡು ಸಿಬ್ಬಂದಿ ಹಾಗೂ ಪ್ರವಾಸಿಗರಿಗೆ ಆತಂಕ ಸೃಷ್ಟಿಯಾಗಿದೆ. ಇದನ್ನೂ ಓದಿ: ಭಾರೀ ಮಳೆ- KRS ಡ್ಯಾಂನ ಒಳ, ಹೊರ ಹರಿವು ಹೆಚ್ಚಳ