ಮೈಸೂರು: ಟಿ.ನರಸೀಪುರ (T.Narasipura) ತಾಲೂಕಿನಲ್ಲಿ ಚಿರತೆ ಅಟ್ಟಹಾಸ ಮುಂದುವರಿದಿದ್ದು, ಚಿರತೆ (Leopard) ದಾಳಿಗೆ ಮೂರನೇ ಬಲಿಯಾಗಿದೆ. ತಾಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಭೀತಿ ಮತ್ತಷ್ಟು ಹೆಚ್ಚಿದೆ.
ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಸಿದ್ದಮ್ಮ (60) ಎಂಬ ಮಹಿಳೆಯನ್ನು ಚಿರತೆ ಬಲಿ ಪಡೆದಿದೆ. ಮನೆಯಾಚೆಯಿದ್ದ ಸೌದೆ ಎತ್ತಿಕೊಳ್ಳಲು ಬಂದಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ಮಾಡಿದೆ. ನಂತರ ಸಿದ್ದಮ್ಮರನ್ನು ಎಳೆದೊಯ್ದಿದೆ. ಈ ವೇಳೆ ಗ್ರಾಮಸ್ಥರು ಕಿರುಚಾಡಿದ ಬೆನ್ನಲ್ಲೇ ಸ್ಥಳದಲ್ಲೇ ಮಹಿಳೆಯ ದೇಹ ಬಿಟ್ಟು ಪರಾರಿಯಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಚಿರತೆ ದಾಳಿಗೆ ಎರಡನೇ ಬಲಿ – ಕಂಡಲ್ಲಿ ಗುಂಡು ಹಾರಿಸಲು ಅರಣ್ಯ ಇಲಾಖೆ ಸೂಚನೆ
Advertisement
Advertisement
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆದು ಗಂಟೆಗಳು ಕಳೆದರೂ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
Advertisement
Advertisement
ತಿಂಗಳ ಹಿಂದೆಯಷ್ಟೇ ಕುರಿ ಕಾಯುತ್ತಿದ್ದ ಹುಡುಗ ಹಾಗೂ ಕಾಲೇಜು ವಿದ್ಯಾರ್ಥಿನಿಯನ್ನು ಚಿರತೆ ಬಲಿ ಪಡೆದಿತ್ತು. ಇದರಿಂದ ಜನರು ಹೊರಗಡೆ ಓಡಾಡಲು ಭಯ ಪಡುತ್ತಿದ್ದರು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆಯು ಚಿರತೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆ ಸೂಚಿಸಿತ್ತು. ಇದನ್ನೂ ಓದಿ: ಹಾಡಹಗಲೇ ಬೈಕ್ ಸವಾರನ ಮೇಲೆ ಎರಗಿದ ಚಿರತೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k