ಹಾವೇರಿ: ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ (Leopard) ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaoan) ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ.
ಮೂರು ವರ್ಷದ ಚಿರತೆ ಮರಿ ರಸ್ತೆ ದಾಟುತ್ತಿದ್ದ ವೇಳೆ ಹಿಟ್ ಆಂಡ್ ರನ್ ಮಾಡಿಕೊಂಡು ವಾಹನ ಸವಾರರು ಹೋಗಿದ್ದಾರೆ. ನಿಧಾನವಾಗಿ ಚಲಿಸಬೇಕಾಗಿದ್ದ ಅರಣ್ಯಪ್ರದೇಶದಲ್ಲಿ ಜೋರಾಗಿ ಹೋಗಿ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ. ಇದನ್ನೂ ಓದಿ: `ಕೈ’ ಮನೆಯಲ್ಲಿ ಅಧಿಕಾರ ಹಂಚಿಕೆ ಜಟಾಪಟಿ; ಇಂದು ಸಿಎಂ – ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ – ರಾಹುಲ್ ಕಟ್ಟಾಜ್ಞೆ ಏನು?
ಘಟನೆಯ ಬಳಿಕ ಅಪರಿಚಿತ ವಾಹನದ ಪತ್ತೆಗಾಗಿ ಇಲಾಖೆ ಸಿಬ್ಬಂದಿ, ಪೊಲೀಸರು ಶೋಧ ಮಾಡುತ್ತಿದ್ದಾರೆ. ಸ್ಥಳಕ್ಕೆ ಶಿಗ್ಗಾಂವಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಎ ಖಾತಾ ಪರಿವರ್ತನೆಗೆ ಜನರಿಂದ ನೀರಸ ಪ್ರತಿಕ್ರಿಯೆ – 100 ದಿನಗಳ ಗಡುವು ವಿಸ್ತರಣೆಗೆ ಜಿಬಿಎ ಚಿಂತನೆ

