ಬೆಂಗಳೂರು ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ – ಬೋನ್ ಅಳವಡಿಸಿ ಪತ್ತೆ ಕಾರ್ಯಾಚರಣೆ

Public TV
1 Min Read
Kanakapura Chirathe Bone

ಬೆಂಗಳೂರು: ನಗರದ ಹೊರವಲಯದ ಕನಕಪುರ (Kanakapura) ರಸ್ತೆಯ ಮಲ್ಲಸಂದ್ರ ಬಳಿ ಚಿರತೆಯೊಂದು (Leopard) ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಶನಿವಾರ ಮಲ್ಲಸಂದ್ರದ (Mallasandra) ವುಡ್ ಫ್ಯಾಕ್ಟರಿ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ದೌಡಾಯಿಸಿದರು. ಬಳಿಕ ನಾಲ್ಕೈದು ಕ್ಯಾಮೆರಾ ಅಳವಡಿಸಿ ಚಿರತೆ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇದನ್ನೂ ಓದಿ: Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

ಈ ಪ್ರದೇಶದಲ್ಲಿ ಬೋನ್ ಅಳವಡಿಸಿದ ಅರಣ್ಯ ಸಿಬ್ಬಂದಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಕಾರ್ಯಾಚರಣೆ ಶುರು ಮಾಡಿದ್ದರು. ಅಲ್ಲಿಯವರೆಗೂ ಚಿರತೆ ಕಾಣಿಸಿಕೊಂಡಿರಲಿಲ್ಲ. ಬಳಿಕ ರಾತ್ರಿಯಾದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇಂದು (ಜೂ. 1) ಬೆಳಗ್ಗೆಯಿಂದಲೇ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ. ಇದನ್ನೂ ಓದಿ: ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Share This Article