ವಿಜಯಪುರ: ನಗರದ ಸಿಂದಗಿ ಬೈಪಾಸ್ (Sindagi Bypass) ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ (Leopard) ಓಡಾಟ ನಡೆಸಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
ನಗರದ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದ ಜನರು ಸುರಕ್ಷಿತ ಕ್ರಮ ತೆಗೆದುಕೊಳ್ಳುವಂತೆ ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಒಂದೇ ಒಂದು ಎನ್‌ಕೌಂಟರ್‌ಗೆ ಬೆಚ್ಚಿದ ನಕ್ಸಲರು – ಸದ್ಯದಲ್ಲೇ 6 ಜನ ಶರಣಾಗತಿ ಸಾಧ್ಯತೆ
ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ನಗರದ ಸಿಂದಗಿ ನಾಕಾ, ಮುನೇಶ್ವರಭಾಗ್ ಪ್ರದೇಶದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಚಿರತೆ ಓಡಾಟದಿಂದ ಮನೆ ಬಿಟ್ಟು ಜನರು ಹೊರ ಬರುತ್ತಿಲ್ಲ. ಆದಷ್ಟು ಬೇಗ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಜನರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜನ ಕೋವಿಡ್ ವಿರುದ್ಧ ಹೋರಾಡುತ್ತಿರುವಾಗ ʻಶೀಷ್ ಮಹಲ್ʼ ನವೀಕರಣ – ಮೋದಿ ಮತ್ತೆ ಕಿಡಿ