ಚಾಮರಾಜನಗರ: ಜಿಲ್ಲೆಯ ಹನೂರು (Hanuru) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.
ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ
ರಾತ್ರಿ ವೇಳೆ ಯಾರೂ ಕೂಡ ದ್ವಿಚಕ್ರ ವಾಹನದಲ್ಲಿ ತೆರಳದಂತೆ ಮನವಿ ಮಾಡಿದ್ದಾರೆ. ಈಗಾಗಲೇ ಚಿರತೆ ಸೆರೆಗೆ ಬೋನುಗಳನ್ನು ಕೂಡ ಅರಣ್ಯ ಇಲಾಖೆ ಅಳವಡಿಸಿತ್ತು. ಇದೀಗ ಶಿವರಾತ್ರಿ ಜಾತ್ರೆ ಕೂಡ ಮುಕ್ತಾಯವಾದ ಹಿನ್ನೆಲೆ ಪಾದಯಾತ್ರೆಯ ಮೂಲಕ ಹೋಗುವವರಿಗೆ ಜಾಗೃತಿ ಮೂಡಿಸಬೇಕಿದೆ. ಅಲ್ಲದೇ ಅವರ ರಕ್ಷಣೆಗೂ ಕೂಡ ಆದ್ಯತೆ ಕೊಡಬೇಕಿದೆ.

