ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಚಿರತೆ (Leopard) ಉಪಟಳದ ಆತಂಕದ ನಡುವೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ (Ghati Subrahmanya Temple) ಸಾಗುವ ರಸ್ತೆಯಲ್ಲಿ ಚಿರತೆ ಕಂಡುಬಂದಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.
ಮಂಗಳವಾರ ಸಂಜೆ ಘಾಟಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮರುಳುತ್ತಿದ್ದ ಭಕ್ತರ ವಾಹನಗಳಿಗೆ ಲಘುಮೇನಹಳ್ಳಿ ಕ್ರಾಸ್ ಬಳಿ ಚಿರತೆ ಎದುರಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಲಘುಮೇನಹಳ್ಳಿ ಕ್ರಾಸ್ ಸಮೀಪ ಚಿರತೆ ರಸ್ತೆ ದಾಟಿದ್ದು, ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೆಜೆಸ್ಟಿಕ್ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ
Advertisement
Advertisement
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಚನ್ನಾಪುರ ಗ್ರಾಮದ ಅಂಚಿನ ಕುರಿ ದೊಡ್ಡಿಗೆ ನುಗ್ಗಿದ್ದ ಚಿರತೆ ಕುರಿಯನ್ನು ತಿಂದು ಹೋಗಿತ್ತು. ಇದರಿಂದಾಗಿ ಗ್ರಾಮದಲ್ಲಿ ಸಂಜೆ ವೇಳೆ ಜನರು ಹೊರಗೆ ಬರಲು ಆತಂಕಪಡುವಂತಾಗಿತ್ತು. ಚನ್ನಾಪುರ ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ವತಿಯಿಂದ ಚನ್ನಾಪುರ ಸಮೀಪದ ನಂದಿಬೆಟ್ಟದ ತಪ್ಪಲಿನ ನೀಲಗಿರಿ ತೋಪಿನಲ್ಲಿ ಚಿರತೆ ಸೆರೆಹಿಡಿಯಲು ಬೋನು ಇರಿಸಲಾಗಿದೆ. ಇದನ್ನೂ ಓದಿ: ಕೊತ್ತಂಬರಿ ಸೊಪ್ಪಿನ ಹಾರ ಹಾಕಿ ಹೆಚ್‍ಡಿಕೆಯನ್ನು ಬರಮಾಡಿಕೊಂಡ ಗ್ರಾಮಸ್ಥರು