ವಿಜಯಪುರ: ಕಳೆದ ಕೆಲವು ತಿಂಗಳಿನಿಂದ ಆತಂಕ ಹುಟ್ಟಿಸಿದ್ದ ಚಿರತೆ ಇಂದು ಜಿಲ್ಲೆಯ ಚಡಚಣ (Chadachana) ತಾಲೂಕಿನ ಮಣಂಕಲಗಿ ಗ್ರಾಮದಲ್ಲಿ ಸೆರೆಯಾಗಿದೆ.
ಇಂದು ಮಣಂಕಲಗಿ ಗ್ರಾಮದ ಜೋಳದ ಹೊಲದಲ್ಲಿ ಚಿರತೆ ಪ್ರತ್ಯಕ್ಷವಾಗಿ ನಾಲ್ವರ ಮೇಲೆ ದಾಳಿ ನಡೆಸಿತ್ತು.ಇದನ್ನೂ ಓದಿ: ಬೆಂಗಳೂರು ಕಸ ಅನ್ನೋದು ಮಾಫಿಯಾ, ಶಾಸಕರೇ ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ: ಡಿ.ಕೆ ಶಿವಕುಮಾರ್
ಮಾದೇವ ಯಾದವಾಡ, ಈರಣ್ಣ ಮೇತ್ರಿ, ಸಂತೋಷ ತಾಂಬೆ, ಕಲ್ಲಪ್ಪ ಕೋಟ್ಯಾಳ ಎಂಬುವವರ ಮೇಲೆ ದಾಳಿ ನಡೆಸಿತ್ತು. ಮಾದೇವ ಯಾದವಾಡ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಚಡಚಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ವೇಳೆ ಚಿರತೆ ಹಿಡಿಯಲು ಜನರು ಜಮೀನಿನ ಸುತ್ತ ನೆರೆದಿದ್ದು, ಝಳಕಿ ಪೊಲೀಸರ ನೆರವಿನಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ವ್ಯಕ್ತಿಯ ಬರ್ಬರ ಹತ್ಯೆ – ಜೊತೆಗಿದ್ದ ಪ್ರೇಯಸಿ ಮೇಲೆಯೇ ಅನುಮಾನ