ಬೆಂಗಳೂರು/ಆನೇಕಲ್: ನಗರದ ಹೊರವಲಯಗಳಲ್ಲಿ ಚಿರತೆ (Leopard) ಹಾವಳಿ ಹೆಚ್ಚಾಗಿದೆ. ಕಾಡಿನಿಂದ ನಾಡಿಗೆ ಬಂದು ಜನರಲ್ಲಿ ಆತಂಕ ಹೆಚ್ಚಿಸಿವೆ. ಬನ್ನೇರುಘಟ್ಟ (Bannerghatta National Park) ವ್ಯಾಪ್ತಿಯಲ್ಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಜನರು ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ.
ಬನ್ನೇರುಘಟ್ಟ ಕಾಡಂಚಿನ ಗ್ರಾಮದ ಬಡಾವಣೆಗಳಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷವಾಗುತ್ತಿರುವುದು ನಿವಾಸಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಇದನ್ನೂ ಓದಿ: ದೇಸಿ ಬೆಳ್ಳುಳ್ಳಿ ದುಬಾರಿ – ನಿಷೇಧಿತ ಚೀನಾ ಬೆಳ್ಳುಳ್ಳಿ ಚಿಕ್ಕಬಳ್ಳಾಪುರಕ್ಕೂ ಎಂಟ್ರಿ?
- Advertisement
ಹೌದು. ಬೆಂಗಳೂರು (Bengaluru) ಹೂರವಲಯದ ಆನೇಕಲ್ (Anekal) ತಾಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆ ಮತ್ತು ಲೋಟಸ್ ಬಡಾವಣೆ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು ಚಿರತೆ ಓಡಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ. ಆದ್ರೆ ರಾತ್ರಿ ಚಿರತೆ ಎಲ್ಲೂ ಸಹ ಪತ್ತೆ ಆಗಿಲ್ಲ. ಇನ್ನು ನಿಸರ್ಗ ಬಡಾವಣೆ ಸೇರಿದಂತೆ ಸುತ್ತಮುತ್ತ ಇರುವ ಎಲ್ಲಾ ಬಡಾವಣೆ ನಿವಾಸಿಗಳು ರಾತ್ರಿ ಸಮಯದಲ್ಲಿ ಒಬ್ಬೊಬ್ಬರೇ ಆಚೆ ಓಡಾಡಬೇಡಿ ಎಂದು ಅರಣ್ಯ ಇಲಾಖೆಯಿಂದ ಎಚ್ಚರಿಕೆ ನೀಡುತ್ತಿದ್ದಾರೆ.
- Advertisement
ಜೊತೆಗೆ ಇತ್ತೀಚಿಗೆ ಬನ್ನೇರುಘಟ್ಟ ಕಾಡಂಚಿನ ಗ್ರಾಮ ಹಾಗೂ ಬಡಾವಣೆಗಳಲ್ಲಿ ಆದಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಇನ್ನು ರಾತ್ರಿ ಸಹ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಿದ್ದು, ಆದಷ್ಟು ಬೇಗ ಚಿರತೆ ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ದಾವಣಗೆರೆ | 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು!