Connect with us

Districts

`ಐ ಮಿಸ್ ಯು’ ಅಮ್ಮ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟು ಹೋದ ವಿದ್ಯಾರ್ಥಿ

Published

on

ಮೈಸೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಪತ್ರ ಬರೆದಿಟ್ಟು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಮೈಸೂರು ನಗರದಲ್ಲಿ ನಡೆದಿದೆ.

ನಗರದ ಮಹರ್ಷಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ ಪ್ರೀತಂ (16) ಎಂಬ ವಿದ್ಯಾರ್ಥಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾನೆ.

ಪ್ರೀತಂ ಇತ್ತೀಚೆಗೆ ಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾನೆ. ಇದರಿಂದ ಬೇಸತ್ತು ತಾಯಿಗೆ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾನೆ. ಪತ್ರದಲ್ಲಿ ” ಅಮ್ಮ ನಾನು ಮನೆ ಬಿಟ್ಟು ಹೋಗುತ್ತಿದ್ದೀನಿ. ದಯವಿಟ್ಟು ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ `ಐ ಮಿಸ್ ಯು’ ಎಂದು ಪ್ರೀತಂ ಬರೆದಿದ್ದಾನೆ.

ಮಗ ನಾಪತ್ತೆಯಾಗಿರುವ ವಿಚಾರ ತಿಳಿದ ತಕ್ಷಣ ಪೋಷಕರು ಕುವೆಂಪುನಗರ ಪೊಲೀಸ್ ಠಾಣೆಗೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *