ಚೆನ್ನೈ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ(ನೀಟ್) ಕಡಿಮೆ ಅಂಕ ಗಳಿಸಿದ್ದರಿಂದ ಖಿನ್ನತೆಗೆ ಒಳಗಾಗಿದ್ದ 20 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಡಗುಮರೈ ನಿವಾಸಿ ಸುಭಾಶ್ಚಂದ್ರ ಬೋಸ್ ಅವರು ನಾಲ್ಕು ದಿನಗಳ ಹಿಂದಷ್ಟೇ ಫಲಿತಾಂಶ ಪ್ರಕಟವಾಗಿದ್ದ ನೀಟ್ ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ಕಡಿಮೆ ಅಂಕ ಗಳಿಸಿದ್ದರು. ನೀಟ್ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ಕಾರಣ ಸುಭಾಶ್ಚಂದ್ರ ಬೋಸ್ ಅವರು ಮನನೊಂದ ನವೆಂಬರ್ 2 ರಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ
ಕೀಟನಾಶಕ ಸೇವಿಸಿ ಹಾಸಿಗೆಯಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿದ ಪೋಷಕರು ಆತನನ್ನು ತಕ್ಷಣ ಆತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಸೇಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಬೋಸ್ ಇಂದು ಬೆಳಗಿನ ಜಾವ 3.30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ
ನೀಟ್ ಪರೀಕ್ಷೆಗೆ ಹಾಜರಾಗಿದ್ದ ರಾಜ್ಯದ ಹಲವು ವೈದ್ಯಕೀಯ ಆಕಾಂಕ್ಷಿಗಳ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವೈದ್ಯಕೀಯ ಆಕಾಂಕ್ಷಿಯ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿರುವ ಎಐಎಡಿಎಂಕೆ ಉನ್ನತ ನಾಯಕ ಕೆ ಪಳನಿಸ್ವಾಮಿ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ