ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಡಲ್ ರಿಸಲ್ಟ್ ತೆಗೆದುಕೊಂಡಿರುವ ಬಿಬಿಎಂಪಿ ಶಾಲೆ ಭಾರೀ ಸುದ್ದಿಯಾಗಿತ್ತು. ಇದೀಗ ಬಿಬಿಎಂಪಿ ಶಾಲೆಯಲ್ಲಿ ಕಾಟಾಚಾರದ ಕ್ಲಾಸ್ ನಡೆಯುತ್ತಿರುವುದು ಪಬ್ಲಿಕ್ ಟಿವಿಯ ಕಣ್ಣಿಗೆ ಬಿದ್ದಿದೆ.
ಸಾಮಾನ್ಯವಾಗಿ ಶಾಲೆ ಎಂದರೆ ಒಂದೊಂದು ತರಗತಿ ವಿದ್ಯಾರ್ಥಿಗಳಿಗೆ ಒಂದೊಂದು ಕೊಠಡಿಯಲ್ಲಿ ಕೂರಿಸಿ ಪಾಠ ಮಾಡುವುದು. ಆದರೆ ಈ ಬೆಂಗಳೂರಿನ ಶಿವಾಜಿನಗರದಲ್ಲಿರುವ ಬಿಬಿಎಂಪಿ ಶಾಲೆಗೆ ಇದೆಲ್ಲ ಲೆಕ್ಕಕ್ಕೇ ಇಲ್ಲ. ಇದನ್ನೂ ಓದಿ: ಬೀದರ್‌ನಲ್ಲಿ ಇಂದು ಸಚಿವ ಆರ್ ಅಶೋಕ್ ಗ್ರಾಮವಾಸ್ತವ್ಯ
Advertisement
Advertisement
6 ಮತ್ತು 7ನೇ ತರಗತಿಯ ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಒಟ್ಟಿಗೇ ಕೂರಿಸಿ ಪಾಠ ಮಾಡಲಾಗುತ್ತಿದೆ. ಅಲ್ಲದೇ ಶಿಕ್ಷಕರ ಕೊರತೆಯೂ ಇದ್ದು, ಶಿಕ್ಷಕರು ರಜೆಯಲ್ಲಿದ್ದಾಗ ಹೀಗೆ ಒಟ್ಟಿಗೆ ಎರಡೂ ತರಗತಿ ಮಕ್ಕಳಿಗೆ ಪಾಠ ಮಾಡಲಾಗುತ್ತದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಸೋಮಶೇಖರ್ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ದಾರಿಯಲ್ಲಿ ಸಿಕ್ಕ ಚಿನ್ನದ ಸರವನ್ನು ಪೊಲೀಸರಿಗೆ ನೀಡಿದ ಮಂಡ್ಯದ ಯುವಕ
Advertisement
Advertisement
ಮೊದಲೇ ಬಿಬಿಎಂಪಿ ಶಾಲೆಗಳು ಫಲಿತಾಂಶದಲ್ಲಿ ಹಿಂದುಳಿದಿದೆ. 10ನೇ ತರಗತಿಯ ಫಲಿತಾಂಶದಲ್ಲಿ ಹೆಚ್ಚಿನ ಪ್ರಗತಿ ಇಲ್ಲದಿರುವುದರಿಂದ ಕಲಿಕಾ ಶೈಲಿ ಗುಣಮಟ್ಟ ಹೆಚ್ಚಿಸುವತ್ತ ಗಮನಹರಿಸಬೇಕಿದೆ. ಶಿಕ್ಷಕರ ಕೊರತೆ ಇರುವಲ್ಲಿ, ಅದನ್ನು ನೀಗಿಸಬೇಕಿದೆ. ಇದು ಹೀಗೇ ಮುಂದುವರಿದಲ್ಲಿ ಬಿಬಿಎಂಪಿ ಶಾಲೆಗಳಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಮತ್ತಷ್ಟು ದೂರವಾಗುವುದರಲ್ಲಿ ಎರಡು ಮಾತಿಲ್ಲ.