– ಸಿಎಂ ಪತ್ನಿ ಗೌರಮ್ಮ ರೀತಿ ಇದ್ದವರು; ಅವರ ಮೇಲೆ ಆಪಾದನೆ ಬಾರದಿರಲಿ
– ಸಿದ್ದರಾಮಯ್ಯ ಪರ ಈಶ್ವರಪ್ಪ ಬ್ಯಾಟಿಂಗ್
ಶಿವಮೊಗ್ಗ: ಸಿದ್ದರಾಮಯ್ಯ (Siddaramaiha) ಕಾನೂನುಬದ್ಧವಾಗಿ ಹೋರಾಟ ಮಾಡಿ ಕ್ಲೀನ್‌ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ( K S Eshwarappa) ಹೇಳಿಕೆ ನೀಡಿದ್ದಾರೆ.
Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಸಿಎಂ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದರು. ಇದನ್ನೂ ಓದಿ : ಧೈರ್ಯವಾಗಿರಿ, ನಿಮ್ಮ ಜೊತೆ ನಾವಿದ್ದೇವೆ: ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್
Advertisement
Advertisement
ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಅವರು ಕೂಡ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡುತ್ತಾರೆ ಎಂಬ ವಿಶ್ವಾಸ ನನಗಿದೆ. ಆದರೆ ಅವರ ಶ್ರೀಮತಿಯವರನ್ನು ಎಲ್ಲಿ ಇದರಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದು ಬೇಡಿಕೊಳ್ಳುತ್ತೇನೆ ಎಂದರು. ಇದನ್ನೂ ಓದಿ : ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ – ಸಿಎಂ ಮುಂದಿರುವ ಆಯ್ಕೆ ಏನು?