ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಕರ್ನಾಟಕ ಸರ್ಕಾರದ (Congress) ಬಗ್ಗೆ ಮಾತಾಡೋ ಬದಲು ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‌ನಲ್ಲಿ ಮಾತನಾಡಲಿ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ದೇವೇಗೌಡರಿಗೆ ತಿರುಗೇಟು ಕೊಟ್ಟಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಮಾತಾಡಿದ್ದ ದೇವೇಗೌಡರ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ಸಂಸತ್‌ನಲ್ಲಿ ಮಾತನಾಡಬೇಕಿರೋದು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡಿರೋ ಅನ್ಯಾಯದ ಬಗ್ಗೆ. ಹೆಜ್ಜೆ ಹೆಜ್ಜೆಗೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಕೇಂದ್ರ ಸರ್ಕಾರದ ಬಜೆಟ್ (Union Budget) ಕರ್ನಾಟಕಕ್ಕೆ ಕರಾಳ ಅಧ್ಯಾಯ ಆಗಿದೆ. ತೆರಿಗೆ ಕಟ್ಟುವ, ಕಷ್ಟಪಟ್ಟು ದುಡಿಯೋ ಕರ್ನಾಟಕ ಜನರ ತೆರಿಗೆ ದುಡ್ಡು ಲೂಟಿ ಆಗುತ್ತಿದೆ. ಕರ್ನಾಟಕದ ಬಗ್ಗೆ ಇವರಿಗೆ ಬದ್ಧತೆ ಇದ್ದರೆ ಕರ್ನಾಟಕಕ್ಕೆ ಮೊದಲು ಕೇಂದ್ರದಿಂದ ನ್ಯಾಯ ಕೊಡಿಸಲಿ. ಅದನ್ನ ಬಿಟ್ಟು ಅವರು ಮಾಡೋ ಅನ್ಯಾಯವನ್ನ ಮುಚ್ಚಿಹಾಕಿ ಇವರು ಕೂಡಾ ಅನ್ಯಾಯದಲ್ಲಿ ಪಾಲಾಗೋದು ಬಿಡಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ದುರಂತ| ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಬಲಿ
ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಚುನಾವಣೆ ಸಮಯದಲ್ಲಿ ಹೇಳಿದ್ದರು. ಅದನ್ನ ಮೊದಲು ಕೊಡಿಸಲಿ. ಮೇಕೆದಾಟಿಗೆ ಕೇಂದ್ರ ಸರ್ಕಾರ ಇನ್ನೂ ಅನುಮತಿ ಕೊಟ್ಟಿಲ್ಲ. ಸುಪ್ರೀಂ ಕೋರ್ಟ್ ಕೂಡ ಮೇಕೆದಾಟಿಗೆ ವಿರೋಧ ಇಲ್ಲ ಎಂದು ಹೇಳಿದೆ. ದೇವೇಗೌಡರೇ ಆಗಲಿ ಯಾರೇ ಆಗಲಿ ಮೊದಲು ಅನುಮತಿ ಕೊಡಿಸಿ. ಚನ್ನಪಟ್ಟಣ ಎಲೆಕ್ಷನ್‌ನಲ್ಲಿ ಕೈಹಿಡಿದು ಸಹಿ ಹಾಕಿಸುತ್ತೇವೆ ಎಂದುಭಾಷಣ ಮಾಡಿದರು. ಅದಕ್ಕೆ ಮೊದಲು ಅನುಮತಿ ಕೊಡಿಸಲಿ. ನಮ್ಮ ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗುತ್ತಿದೆ. ಅದನ್ನ ಸರಿ ಮಾಡಲಿ. ಆಮೇಲೆ ಉಳಿದಿದ್ದ ವಿಷಯ ಮಾತನಾಡಲು ಅವರಿಗೂ ನೈತಿಕತೆ ಇರುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣ | ಸಿಬಿಐ ತನಿಖೆ ಚುರುಕು ಮೂವರು ಆರೋಪಿಗಳಿಗೆ ನೋಟಿಸ್