ತುಮಕೂರು: ಅಂಕಣಕಾರ ದಿನೇಶ್ ಅಮಿನ್ ಮಟ್ಟು ಅವರು ಪೊಳ್ಳು ಹೇಳಿಕೆ, ಮಾತುಗಳನ್ನು ನಿಲ್ಲಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಒತ್ತಾಯಿಸಿದ್ದಾರೆ.
ಇಲ್ಲಿನ ತಿಪಟೂರು ನಗರದಲ್ಲಿ ನಡೆದ ತಾಲ್ಲೂಕುಮಟ್ಟದ ಆರೋಗ್ಯ ಮೇಳದಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ದಿನೇಶ್ ಅಮಿನ್ ಮಟ್ಟು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿದ್ದರು. ಆಗ ಅವರಿಗೆ ಟಿಪ್ಪು ಸುಲ್ತಾನ್ ಬಗ್ಗೆ ಇದ್ದಂತಹ ಕಾಳಜಿಯ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳನ್ನು ಪಠ್ಯದಲ್ಲಿ ಸೇರಿಸುವ ಕಾರ್ಯ ಮಾಡಬಹುದಿತ್ತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷವನ್ನು ಸೇರಲು ನಿರಾಕರಿಸಿದ ಪ್ರಶಾಂತ್ ಕಿಶೋರ್
Advertisement
Advertisement
ಅಂಬೇಡ್ಕರ್ ಚಿಂತನೆ, ವಿಚಾರಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಾ ಬಂದಿದೆ. ಈಗಾಗಲೇ, ಪಠ್ಯದಲ್ಲಿಯೂ ಅಳವಡಿಸಲಾಗಿದೆ. ದಿನೇಶ್ ಅಮಿನ್ ಮಟ್ಟು ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರರಾಗಿದ್ದರು. ಅಂದಿನ ಸರ್ಕಾರದಲ್ಲಿ ಮಾಡದ ಕಾರ್ಯದ ಬಗ್ಗೆ ಮತ್ತೊಬ್ಬರಿಗೆ ತಿಳಿಹೇಳಬೇಕು, ಪೊಳ್ಳು ಹೇಳಿಕೆ, ಮಾತುಗಳನ್ನು ನಿಲ್ಲಿಸಬೇಕು ಎಂದು ಕುಟುಕಿದರು. ಇದನ್ನೂ ಓದಿ: ಭಾರತದಲ್ಲಿ ಕೋವಿಡ್-19 ನಾಲ್ಕನೇ ಅಲೆ ಪ್ರಾಬಲ್ಯ ತುಂಬಾ ಕಡಿಮೆ: ವೈರಾಣು ತಜ್ಞ
Advertisement
ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇದ್ದಾಗ ಕಾಂಗ್ರೆಸ್ ಪಕ್ಷ ಹೇಗೆ ನಡೆಸಿಕೊಂಡಿದೆ? ಎಂಬುದನ್ನು ಅರಿಯುವ ಅಗತ್ಯವಿದೆ. ಈಗಾಗಲೇ, ಅಂಬೇಡ್ಕರ್ ಚಿಂತನೆಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲಾಗಿದೆ. ದೇಶದಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂಬುದು ಎಲ್ಲರಿಗೂ ಅನ್ನಿಸಿದೆ ಎಂದು ತಿಳಿಸಿದರು.