ಮೈಸೂರಿನಲ್ಲಿ ಇಂದು ನಟ ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕವನ್ನು (Memorial) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಮಾರಕವು ಪ್ರವಾಸಿ ತಾಣವಾಗಬೇಕು. ಈ ನಿಟ್ಟಿನಲ್ಲಿ ಸರಕಾರವು ವಿಷ್ಣುವರ್ಧನ್ ಅವರ ಕುಟುಂಬದೊಂದಿಗೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು. ಈ ನಾಡಿಗೆ ವಿಷ್ಣುವರ್ಧನ್ ನೀಡಿದ ಕೊಡುಗೆಯನ್ನು ಸ್ಮರಿಸಿದ ಅವರು, ನಾನೂ ಕೂಡ ವಿಷ್ಣುವರ್ಧನ್ ಅವರ ಅಭಿಮಾನಿ ಎಂದು ಘೋಷಣೆ ಮಾಡಿದರು.
Advertisement
ಬೊಮ್ಮಾಯಿ ಅವರು ಭಾಷಣ ಮಾಡುವ ವೇಳೆ ವಿಷ್ಣು ಅಭಿಮಾನಿಗಳು ಪ್ಲೇ ಕಾರ್ಡ್ ಹಿಡಿದುಕೊಂಡು ಮೌನವಾಗಿ ‘ಮಾನ್ಯ ಮುಖ್ಯಮಂತ್ರಿಗಳೇ.. ಡಾ.ವಿಷ್ಣುವರ್ಧನ್ ಅವರು ಕರ್ನಾಟಕ ರತ್ನ ಅಲ್ಲವೆ?’ ಎನ್ನುವ ಬೋರ್ಡ್ ಹಿಡಿದುಕೊಂಡು ನಿಂತಿದ್ದರು. ಅದನ್ನು ಕಂಡ ಮುಖ್ಯಮಂತ್ರಿಗಳು, ‘ನಿಮ್ಮೆಲ್ಲರ ಭಾವನೆಗಳಿಗೆ ನಮ್ಮ ಸರಕಾರ ಮುಂದಿನ ದಿನಗಳಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತದೆ’ ಎನ್ನುವ ಭರವಸೆಯನ್ನೂ ನೀಡಿದರು. ಇದನ್ನೂ ಓದಿ: ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ
Advertisement
Advertisement
ಮುಂದುವರೆದು ಮಾತನಾಡುತ್ತಾ, ‘ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರೋ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಹೊಸ ನಾಯಕ, ಅವ್ರ ಚಿತ್ರ ಬಂದಿತ್ತು. ಮೊದಲ ಸಲಾ ನೋಡಿದವ್ರು ಖಂಡಿತವಾಗಿ ವಿಷ್ಣುವರ್ಧನ್ ಫ್ಯಾನ್ ಆಗ್ತಾ ಇದ್ದರು. ನಾಗರಹಾವು ಚಿತ್ರದ ಮೂಲಕ ನಾಡಿನ ಜನಮನ ಗೆದ್ದವರು ಡಾ. ವಿಷ್ಣುವರ್ಧನ್. ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ ಸಾಹಸ ಸಿಂಹನಾಗಿ ಕರ್ನಾಟಕದಲ್ಲಿ ಮರೆದವರು’ ಎಂದು ಕೊಂಡಾಡಿದರು ಬಸವರಾಜ ಬೊಮ್ಮಾಯಿ.
Advertisement
ಈ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ, ಮಗಳು ಕೀರ್ತಿ ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಮೈಸೂರಿಗೆ ಹರಿದು ಬಂದಿದ್ದರು. ಅನ್ನದಾನ, ರಕ್ತದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸ್ಥಳದಲ್ಲೇ ಆಯೋಜನೆ ಮಾಡಲಾಗಿತ್ತು.
2020ರ ಸೆ.15ರಂದು ಸ್ಮಾರಕ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರ್ಚುವೆಲ್ ಆಗಿ ಭೂಮಿ ಪೂಜೆಯನ್ನು ನೆರವೇರಿಸಿದ್ದರು. ಬರೋಬ್ಬರಿ 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದ್ದು, ಪೊಲೀಸ್ ವಸತಿ ನಿಗಮವು ಇದರ ಉಸ್ತುವಾರಿ ವಹಿಸಿಕೊಂಡಿತ್ತು. 5 ಎಕರೆ ಜಾಗದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ಒಟ್ಟು 27 ಸಾವಿರ ಚದರಡಿಯಲ್ಲಿ ಸ್ಮಾರಕದ ಕಟ್ಟಡ ತಲೆಯೆತ್ತಿದೆ.
ಸ್ಮಾರಕ ಕಟ್ಟದಲ್ಲಿ ಎರಡು ಎಕರೆಯಲ್ಲಿ ತಳಮಹಡಿ, ನೆಲಮಹಡಿ ಹಾಗೂ ವಿಷ್ಣುವರ್ಧನ್ ನಿಂತಿರುವ ಭಂಗಿಯ ಪ್ರತಿಮೆ, ಸಂಭಾಗಣ, ಕಲಾವಿದರ ಕೊಠಡಿ, ತರಗತಿ ಕೊಠಡಿಗಳು ಹೀಗೆ ನಾನಾ ಕಟ್ಟಡಗಳನ್ನು ಅದು ಒಳಗೊಂಡಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ವಿಷ್ಣು ಪ್ರತಿಮೆಯು ಕೂಡ ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ. ಅಲ್ಲದೇ, ವಿಷ್ಣುವರ್ಧನ್ ಅವರ ಚಿತಾಭಸ್ಮವನ್ನು ಇಲ್ಲಿಯೇ ತಂದಿಡಲಾಗುತ್ತದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k