ವಿಜಯನಗರ: ಸಾಮಾನ್ಯವಾಗಿ ಕೃಷಿ ಕೆಲಸ ಮಾಡುವವರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರಲ್ಲ. ಈ ಹಿನ್ನೆಲೆಯಲ್ಲಿ ಯುವ ರೈತನೊಬ್ಬ, ರೈತರಿಗೆ (farmer) ಕನ್ಯೆ ಕೊಡಲಿ ಎಂದು ಬರೆದು ರಥೋತ್ಸವದಲ್ಲಿ ಹರಕೆ ತೀರಿಸಿದ್ದಾನೆ.
ವಿಜಯನಗರ (Vijayanagara) ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಮ್ಮನಹಳ್ಳಿ ದುರ್ಗಾಂಬಿಕೆ ರಥೋತ್ಸವ ನಿನ್ನೆ (ಬುಧವಾರ) ಸಂಜೆ ಜರುಗಿದೆ. ಈ ರಥೋತ್ಸವದಲ್ಲಿ, ಓರ್ವ ಯುವ ರೈತ ಬಾಳೆಹಣ್ಣಿನ ಮೇಲೆ ಬರೆದಿರುವ ಹರಿಕೆಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Advertisement
Advertisement
ಹರಿಕೆಯಲ್ಲಿ ಏನಿದೆ?: ಜನರ ಮನಸ್ಸು ಬದಲಾಗಲಿ, ರೈತರಿಗೆ ಕನ್ಯೆ ಕೊಡಲಿ ಎಂದು ಬಾಳೆಹಣ್ಣಿನ ಮೇಲೆ ಬರೆದಿದ್ದಾನೆ. ಇದನ್ನು ನಂತರ ರಥೋತ್ಸವದ ವೇಳೆ ದುರ್ಗಾದೇವಿ ರಥಕ್ಕೆ ಸಮರ್ಪಿಸಿ ತನ್ನ ಹರಕೆಯನ್ನು ಸಮರ್ಪಣೆ ಮಾಡಿದ್ದಾನೆ. ಇದನ್ನೂ ಓದಿ: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ
Advertisement
ತಾಯಿ ದುರ್ಗಾಂಬಿಕೆ ಜನರ ಮನಸ್ಸು ಬದಲಾಯಿಸಿ, ರೈತರಿಗೂ ಮದುವೆಯಾಗಲು ಹೆಣ್ಣು ಸಿಗಲಿ. ಎಲ್ಲರಿಗೂ ಈ ರೀತಿಯ ಮನಸ್ಥಿತಿಯನ್ನು ಕರುಣಿಸಲಿ ಎಂದು ಹರಕೆ ತೀರಿಸಿದ್ದಾರೆ. ಈಗ ಆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನೂ ಓದಿ: ವಿಡಿಯೋ ಕಾಲ್ ಮಾಡಿ ಹೆಂಡತಿ ತೋರಿಸದಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k