Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಕೆ ಶಿವಕುಮಾರ್

Bengaluru City

ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಕೆ ಶಿವಕುಮಾರ್

Public TV
Last updated: November 18, 2023 5:43 pm
Public TV
Share
4 Min Read
dk shivakumar
SHARE

ಬೆಂಗಳೂರು: ಕುಮಾರಸ್ವಾಮಿ (HD Kumaraswamy) ಅವರು ಮಾಜಿ ಮುಖ್ಯಮಂತ್ರಿಗಳು. ಅವರಿಗೊಂದು ಘನತೆ ಇದೆ. ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ, ಯತೀಂದ್ರ ಅವರ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕುರಿತು ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಣ್ಣ ಹಾಗೂ ವಿಜಯೇಂದ್ರ ಅವರು ಈಗ ಪಾರ್ಟ್ನರ್‌ಗಳು. ಅವರ ಮಧ್ಯೆಯೇ ಗೊಂದಲ ಇರುವಾಗ ನಾನು ಹೇಗೆ ಪ್ರತಿಕ್ರಿಯೆ ನೀಡಲಿ. ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಪಕ್ಷದ ಅಧ್ಯಕ್ಷರಾಗಿದ್ದವರು. ಅವರು ಆ ಸ್ಥಾನಗಳಿಗೆ ತಕ್ಕಂತೆ ಗೌರವ ಉಳಿಸಿಕೊಳ್ಳಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ಅವರ ತಂದೆಯವರು ಅನೇಕ ಬಾರಿ ಈ ಬಗ್ಗೆ ಸಲಹೆ ನೀಡಿದ್ದಾರೆ ಎಂಬ ವಿಚಾರ ಕೇಳಿದೆ. ದೇವೇಗೌಡರು, ಯಡಿಯೂರಪ್ಪ, ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಸದಾನಂದಗೌಡರು, ಬಸವರಾಜ ಬೊಮ್ಮಾಯಿ ಅವರು ಕೂಡ ಮಾಜಿ ಮುಖ್ಯಮಂತ್ರಿಗಳು. ಅವರು ಇವರಂತೆ ಸುಮ್ಮನೆ ಮಾತನಾಡುತ್ತಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

ದೇವರು, ಜನ ಕೊಟ್ಟ ಅವಕಾಶ, ಬೆಂಬಲಿಗರ ಸಹಾಯ, ತಂದೆ-ತಾಯಿ ಆಶೀರ್ವಾದ, ತಮ್ಮದೇ ಆದ ಹೋರಾಟದಿಂದ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದವರು. ಆ ಸ್ಥಾನಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಬೆಳಗ್ಗೆಯಿಂದ ಸಂಜೆವರೆಗೂ ಮನಸ್ಸಿಗೆ ಬಂದಂತೆ ಈ ರೀತಿ ಮಾತನಾಡಿದರೆ ಪ್ರಯೋಜನವಿಲ್ಲ. ಮಾಜಿ ಮುಖ್ಯಮಂತ್ರಿ ಮಾತು, ವರ್ತನೆ ಎಂದರೆ ನಾವು ಹೆದರಿ ಗಡಗಡ ನಡುಗುವಂತೆ ಇರಬೇಕು. ನಮ್ಮ ಮಾಜಿ ಶಾಸಕ ಯತೀಂದ್ರ (Yathindra Siddaramaiah) ಅವರು ತಮ್ಮ ತಂದೆಗಾಗಿ ಸ್ಥಾನ ತ್ಯಾಗ ಮಾಡಿದವರು. ನಾವು ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಅವರನ್ನು ಎಂಎಲ್‌ಸಿ ಮಾಡುತ್ತೇವೆ ಎಂದರೂ ಅದನ್ನು ಬೇಡ ಎಂದವರು. ಆತ ತಂದೆಯ ಕ್ಷೇತ್ರದಲ್ಲಿ ಕೆಡಿಪಿ ಸದಸ್ಯನಾಗಿ ಕೆಲಸದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವರಿಗೆ ನೂರಾರು ಕೆಲಸಗಳಿರುತ್ತವೆ. ನಮ್ಮ ಕ್ಷೇತ್ರದಲ್ಲೂ ಅಧಿಕಾರಿಗಳ ವರ್ಗಾವಣೆ ಅರ್ಜಿ ಇಟ್ಟುಕೊಂಡು ಅನೇಕರು ಬರುತ್ತಾರೆ. ಹಾಗೆಂದು ಯತೀಂದ್ರ ಅವರು ವರ್ಗಾವಣೆ ಮಾಡಿದ್ದಾರೆ ಎಂದು ಅರ್ಥವಲ್ಲ. ಅವರು ಶಾಸಕರಲ್ಲದಿದ್ದರೂ ಕ್ಷೇತ್ರದ ಜನರ ಕೆಲಸ ಮಾಡುತ್ತಿದ್ದಾರೆ. ಅದನ್ನು ನೋಡಿ ಖುಷಿಪಡಬೇಕು. ಈ ರೀತಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಈ ಮೂರು ದಿನ ಕರೆಂಟ್ ಬಿಲ್ ಕಟ್ಟೋಕೆ ಆಗಲ್ಲ – ನವೆಂಬರ್ ಅಂತ್ಯಕ್ಕೆ ವಿದ್ಯುತ್ ದರ ಏರಿಕೆ ಸಾಧ್ಯತೆ?

ವಿಧಾನಮಂಡಲ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇನೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಈ ವಿಚಾರ ಪ್ರಸ್ತಾಪ ಮಾಡಲೇಬೇಕು. ಈ ವಿಚಾರದ ಜೊತೆಗೆ ಅವರು ಇದುವರೆಗೂ ಜನತೆಗೆ ಕೊಟ್ಟ ಮಾತನ್ನು ಬಿಚ್ಚಿಟ್ಟು ಚರ್ಚೆ ಮಾಡಲಿ. ಪಕ್ಷದ ಅಧ್ಯಕ್ಷರಾಗಿ ಅವರಿಗೆ ವಿಚಾರ ಪ್ರಸ್ತಾಪಿಸುವ ಹಕ್ಕಿದೆ. ಅದನ್ನು ನಾನೇಕೆ ಕಿತ್ತುಕೊಳ್ಳಲಿ, ಬೇಡ ಎನ್ನಲಿ ಎಂದು ಹೇಳಿದರು. ಇನ್ನು ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್‌ನಿಂದ ಅಮಾನತು ಬಗ್ಗೆ ಮಾತನಾಡಿದ ಅವರು, ಇದು ಅವರ ಪಕ್ಷದ ವಿಚಾರ. ನಾನು ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಜಿ.ಟಿ ದೇವೇಗೌಡರ ಭೇಟಿ ವಿಶೇಷ ಏನಿಲ್ಲ. ಎಲ್ಲಾ ಪಕ್ಷದ ಶಾಸಕರು ಕೆಲಸದ ವಿಚಾರವಾಗಿ ನನ್ನನ್ನು ಭೇಟಿ ಮಾಡುತ್ತಾರೆ. ನನಗೆ ಅನೇಕ ಸ್ನೇಹಿತರಿದ್ದಾರೆ. ಅವರ ಜೊತೆ ಊಟ, ಚರ್ಚೆ ಮಾಡುತ್ತೇವೆ. ಕುಮಾರಸ್ವಾಮಿ ಅವರು ಕೂಡ 40 ಜನ ಕಾಂಗ್ರೆಸ್ ಶಾಸಕರು ಬಿಜೆಪಿಯ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಏನು ಬಿಜೆಪಿಯ ವಕ್ತಾರರೇ? ಎಂದು ಕಿಡಿಕಾರಿದರು. ಇದನ್ನೂ ಓದಿ: ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ

ಅಶೋಕ್ (R Ashok) ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹೌದು, ನನಗೆ ಬಹಳ ಸಂತೋಷವಾಗಿದೆ. ಅವರು ಹಿರಿಯರಲ್ಲವೇ? ಅವರು ಸೋತಿದ್ದಾರೆ ಎಂದು ನಾನು ಎಲ್ಲೂ ಹೇಳಿಲ್ಲ. ರಾಜಕೀಯದಲ್ಲಿ ಸೋಲು, ಗೆಲುವು ಎರಡನ್ನೂ ಸಮಾನವಾಗಿ ಸ್ವೀಕಾರ ಮಾಡಬೇಕು. ಎಂತೆಂಥವರೇ ಸೋತಿದ್ದಾರೆ, ಗೆದ್ದಿದ್ದಾರೆ. ನಾನು, ದೇವೇಗೌಡರು, ಕುಮಾರಸ್ವಾಮಿ ಅವರು ಸೋತಿಲ್ಲವೇ? ಚುನಾವಣೆಗೆ ನಿಂತವರೆಲ್ಲಾ ಗೆಲ್ಲಲು ಸಾಧ್ಯವೇ? ಎಂದರು. ಇದನ್ನೂ ಓದಿ: ನನ್ನ ಧರಧರನೇ ಎಳೆದೊಯ್ದು ಠಾಣೆಯಲ್ಲಿ ಕೂರಿಸಿದ್ದರು- ಎಮರ್ಜೆನ್ಸಿ ನೆನಪು ಮೆಲುಕು ಹಾಕಿದ ಸಿಎಂ

ಈಗ ರಾಜಕೀಯ ಪಂದ್ಯ ರೋಚಕವಾಗಿದೆ ಎಂದು ಅನಿಸುತ್ತಿದೆಯಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ಏನೇನೋ ದೊಡ್ಡ ಸ್ಕೀಮು, ತಂತ್ರ, ಲೆಕ್ಕಾಚಾರ ಹಾಕುತ್ತಿದ್ದಾರೆ. ಎಲ್ಲವೂ ನಡೆಯಲಿ ಬಿಡಿ. ನನ್ನನ್ನು ಜೈಲಿಗೆ ಹಾಕಲು ಸಿದ್ಧತೆ ಮಾಡುತ್ತಿದ್ದಾರೆ. ಅವರಿಗೆ ನಾನು ಶುಭ ಕೋರುತ್ತೇನೆ ಎಂದು ತಿಳಿಸಿದರು. ಅಶೋಕಣ್ಣ ತಮ್ಮ ಅನುಭವದ ಭಂಡಾರದ ಮೂಲಕ ಸರ್ಕಾರಕ್ಕೆ ಮಾರ್ಗದರ್ಶನ ನೀಡಲಿ. ಸರ್ಕಾರ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದೆ ಎಂದಿದ್ದಾರೆ. ಅಶೋಕಣ್ಣ ಏಳು ಬಾರಿ ಗೆದ್ದಿದ್ದು, ಹಿರಿಯ ನಾಯಕರಿದ್ದಾರೆ. ಅವರಿಗೆ ದೊಡ್ಡ ಸ್ಥಾನ ಸಿಕ್ಕಿದೆ. ವಿರೋಧ ಪಕ್ಷದ ಸ್ಥಾನ ಎಂದರೆ ಸಂವಿಧಾನದ ಮೂಲಕ ಕೊಟ್ಟಿರುವ ಸ್ಥಾನ. ಅವರಿಗೆ ಈ ಸ್ಥಾನ ಸಿಕ್ಕಿರುವುದು ಸಂತೋಷ. ಆ ಪಕ್ಷದಲ್ಲಿ ಬಹಳ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ವಿರೋಧ ಪಕ್ಷದ ನಾಯಕ ಸ್ಥಾನವನ್ನು ಬಹಳ ಸಮರ್ಥವಾಗಿ ನಿರ್ವಹಿಸಲಿ. ಅವರ ಅನುಭವದ ಭಂಡಾರದ ಮೂಲಕ ಸರ್ಕಾರಕ್ಕೆ ಮಾರ್ಗದರ್ಶನ ನೀಡಲಿ. ನಮ್ಮ ತಪ್ಪುಗಳನ್ನು ತಿದ್ದುವ ಕೆಲಸ ಮಾಡಲಿ. ಬಿಜೆಪಿ (BJP) ಕೊನೆಗೂ ವಿರೋಧ ಪಕ್ಷದ ನಾಯಕ (Opposition Leader) ಆಯ್ಕೆ ಮಾಡಿರುವುದು ಸಂತೋಷದ ವಿಚಾರ ಎಂದು ಹೇಳಿದರು. ಇದನ್ನೂ ಓದಿ: ಟೀಂ ಇಂಡಿಯಾ ಪ್ರಾಕ್ಟೀಸ್ ಜೆರ್ಸಿ, ಮೆಟ್ರೋ ಸ್ಟೇಷನ್‍ಗೂ ಕೇಸರಿ ಬಣ್ಣ- ಕೇಂದ್ರದ ವಿರುದ್ಧ ದೀದಿ ವಾಗ್ದಾಳಿ

TAGGED:bjpDK Shivakumarhd kumaraswamyOpposition leaderr ashokYathindra siddaramaiahಅಶೋಕ್ಕುಮಾರಸ್ವಾಮಿಡಿಕೆ ಶಿವಕುಮಾರ್ಬಿಜೆಪಿಯತೀಂದ್ರವಿರೋಧ ಪಕ್ಷದ ನಾಯಕ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
3 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
24 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
54 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
1 hour ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?