– ಅಧ್ಯಯನ ಪೀಠ ಆರಂಭಿಸಲು ಒತ್ತಾಯ
ನವದೆಹಲಿ: ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸುವುದರೊಂದಿಗೆ ಕರ್ನಾಟಕದ ಏಕೀಕೃತ ಚಳುವಳಿಯಲ್ಲೂ ಮುಖಂಡತ್ವವನ್ನು ವಹಿಸಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಸ್.ನಿಜಲಿಂಗಪ್ಪ ಮತ್ತು ಕೆಂಗಲ್ ಹನುಮಂತಯ್ಯನವರ ಸೇವೆ ಅವಿಸ್ಮರಣೀಯವಾದದ್ದು. ಈ ಹಿನ್ನೆಲೆ ಅವರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕು ಮತ್ತು ಶಾಲಾ ಪಠ್ಯದಲ್ಲಿ ಅವರ ಬದುಕು ಸೇರ್ಪಡೆಯಾಗಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಒತ್ತಾಯಿಸಿದ್ದಾರೆ.
Advertisement
ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದ ಅವರು, ಭಾರತದ ಸ್ವಾತಂತ್ರ್ಯ ಚಳುವಳಿ ಮತ್ತು ಕರ್ನಾಟಕ ಏಕೀಕರಣ ಚಳುವಳಿಯ ಸಂದರ್ಭದಲ್ಲಿ ಜನರಲ್ಲಿ ಅರಿವು ಮತ್ತು ಹೋರಾಟದ ಕಿಚ್ಚನ್ನು ಮೂಡಿಸುವುದರೊಂದಿಗೆ ಹರಿದು ಹಂಚಿ ಹೋಗಿದ್ದ ಕನ್ನಡ ಪ್ರದೇಶಗಳು ಒಂದಾಗಬೇಕೆಂಬ ಅವರ ದೃಢ ಸಂಕಲ್ಪದಿಂದ 1956 ನವೆಂಬರ್ 1ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. ಇದನ್ನೂ ಓದಿ: ಬೈರತಿ ಸುರೇಶ್ ದುರ್ಯೋಧನ, ದುಶ್ಯಾಸನ ಇದ್ದಂತೆ: ಏಕವಚನದಲ್ಲೇ ಹೆಚ್.ವಿಶ್ವನಾಥ್ ವಾಗ್ದಾಳಿ
Advertisement
Advertisement
ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಅವರು ನೀಡಿದ ಹತ್ತಾರು ಜನಪರ ಯೋಜನೆಗಳು, ಅಭಿವೃದ್ಧಿಪರ ಚಿಂತನೆಗಳು ಅನುಷ್ಠಾನಗೊಂಡಿವೆ. ಕನ್ನಡ ನಾಡಿನ ಬಗ್ಗೆ ಅವರಿಗಿದ್ದ ದೂರದೃಷ್ಟಿಯ ಚಿಂತನೆಯ ಫಲವಾಗಿ ಇಂದು ಕರ್ನಾಟಕ ರಾಜ್ಯ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದ್ದು, ಇವುಗಳು ರಾಜ್ಯದ ಚರಿತ್ರೆಯಲ್ಲಿ ಐತಿಹಾಸಿಕ ಮೈಲುಗಲ್ಲಾಗಿದೆ. ಕನ್ನಡಿಗರು ಹಾಗೂ ಮುಂದಿನ ಪೀಳಿಗೆ ಸದಾ ಈ ಮಹನೀಯರನ್ನು ನೆನಪಿಸಿಕೊಳ್ಳುವ ಕಾರ್ಯವನ್ನು ಕರ್ನಾಟಕ ಸರ್ಕಾರದಿಂದ ನಡೆಯಬೇಕಿದೆ.
Advertisement
ಈ ಹಿನ್ನೆಲೆ ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಪಠ್ಯಪುಸ್ತಕಗಳಲ್ಲಿ ಎಸ್. ನಿಜಲಿಂಗಪ್ಪ ಮತ್ತು ಕೆಂಗಲ್ ಹನುಮಂತಯ್ಯನವರ ಜೀವನ-ಬದುಕು ರಾಜ್ಯದ ಅಭಿವೃದ್ಧಿಗೆ ಅವರು ಕೈಗೊಂಡ ಸೇವಾಕಾರ್ಯಗಳನ್ನು ಪರಿಚಯಿಸಬೇಕು. ಎಸ್.ನಿಜಲಿಂಗಪ್ಪ ಮತ್ತು ಕೆಂಗಲ್ ಹನುಮಂತಯ್ಯನವರ ಜನ್ಮದಿನಾಚರಣೆಯನ್ನು ಕರ್ನಾಟಕ ಸರ್ಕಾರದಿಂದ ಆಚರಿಸಬೇಕು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಂಗಲ್ ಹನುಮಂತಯ್ಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಎಸ್.ನಿಜಲಿಂಗಪ್ಪ ಅವರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡಿಗೂ ಸಂದಾಯ ಆಗಿರಬಹುದು – ಸಿ.ಟಿ ರವಿ