Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಿಗಳು ರಾಜಕಾರಣ ಮಾಡಲಿ, ಧರ್ಮಾಧಿಕಾರಿಗಳು ಈ ವ್ಯಾಮೋಹ ಬಿಡಲಿ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕಾರಣಿಗಳು ರಾಜಕಾರಣ ಮಾಡಲಿ, ಧರ್ಮಾಧಿಕಾರಿಗಳು ಈ ವ್ಯಾಮೋಹ ಬಿಡಲಿ: ಹೆಚ್‌ಡಿಕೆ

Bengaluru City

ರಾಜಕಾರಣಿಗಳು ರಾಜಕಾರಣ ಮಾಡಲಿ, ಧರ್ಮಾಧಿಕಾರಿಗಳು ಈ ವ್ಯಾಮೋಹ ಬಿಡಲಿ: ಹೆಚ್‌ಡಿಕೆ

Public TV
Last updated: November 29, 2025 9:34 pm
Public TV
Share
4 Min Read
HD Kumaraswamy 1
SHARE

ಬೆಂಗಳೂರು: ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ, ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದರು.

ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ವಿಚಾರದಲ್ಲಿ ಸ್ವಾಮೀಜಿಗಳು ಮಧ್ಯ ಪ್ರವೇಶ ಮಾಡುವುದು ಅನಗತ್ಯ. ಅವರಿಗೆ ಇದರಲ್ಲಿ ಏನೂ ಕೆಲಸ ಇಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸಿಎಂ, ಡಿಸಿಎಂ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ: ಡಿ.ಕೆ.ಸುರೇಶ್

ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕಲಹದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಹೆಚ್‌ಡಿಕೆ, ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಅಧಿಕಾರ ಹೋದಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಮೀಜಿಗಳ ಕೆಲಸವೇ ಬೇರೆ. ಒಕ್ಕಲಿಗ ಸಮಾಜ ಅಷ್ಟೇ ಅಲ್ಲ, ಬೇರೆ ಯಾವುದೇ ಸಮಾಜದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಧರ್ಮಗಳ ವಿಚಾರ ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನ ದುರುಪಯೋಗಪಡಿಸಿಕೊಂಡು, ರಾಜಕಾರಣ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.

DK Shivakumar Siddaramaiah 1

ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಅವಕಾಶ ಇರಬಾರದು. ಅದಕ್ಕೆ ಯಾರೂ ಕಾರಣ ಆಗಬಾರದು. ನಾನು ಧರ್ಮಗುರುಗಳಿಗೆ ಮನವಿ ಮಾಡುವುದು ಇಷ್ಟೇ. ಸಮಾಜದಲ್ಲಿ ಶಾಂತಿ ನೆಮ್ಮದಿ ಮುಖ್ಯ. ಜಾತಿ ಮತ್ತು ಧರ್ಮ ಸಂಘರ್ಷ ಮಾಡಬಾರದು. ಅದು ರಾಜ್ಯಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಕಲಹದಲ್ಲಿ ಜಾತಿ ಧರ್ಮಗಳನ್ನು ಎಳೆದು ತರೋದು ಬೇಕಾಗಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಜಾತಿ ರಾಜಕಾರಣ ನಡೆಯುತ್ತಿದೆ. ಇದರಿಂದ ನಷ್ಟ ರಾಜಕಾರಣ ಮಾಡುವವರಿಗೆ ಆಗುವುದಿಲ್ಲ. ರಾಜ್ಯಕ್ಕೆ ದೊಡ್ಡ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಇದರ ಅವಶ್ಯಕತೆ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರ ಅಲ್ಲ. ಕರ್ನಾಟಕ ಜನತೆಗೆ ಆಗುವ ಮುಜುಗರ ಎಂದು ವಾಗ್ದಾಳಿ ನಡೆಸಿದರು.

ಈ ಸರ್ಕಾರಕ್ಕೆ ರಾಜ್ಯದ ಜನ 140 ಸ್ಥಾನ ನೀಡಿದ್ದರು. ಅಷ್ಟು ಬಹುಮತ ಕೊಟ್ಟರೂ ಜನರ ನಿರೀಕ್ಷೆ ಹುಸಿ ಮಾಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಇವರು ಮಾಡಿದ್ದು ಏನು? ಕುರ್ಚಿಗಾಗಿ ಕಿತ್ತಾಟ ಮಾಡುತ್ತಿದ್ದಾರೆ. ರಾಜ್ಯದ ಬಗ್ಗೆ ಇವರಿಗೆ ಕಾಳಜಿ ಇಲ್ಲ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎನ್ನುವ ಪರಿಜ್ಞಾನ ಇವರಿಗೆ ಇಲ್ಲ. ನನ್ನ ಪ್ರಕಾರ ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: 20 ದಿನಗಳ ಕಾಲ ಅಧಿವೇಶನ ನಡೆಸಬೇಕು – ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ: ಆರ್‌.ಅಶೋಕ್

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿವೆ ಎಂದು ಸಿಎಂ ಹೇಳಿಕೆ ಕುರಿತು ಮಾತನಾಡಿ, ಸಿದ್ದರಾಮಯ್ಯ ಅವರು ಒಬ್ಬರೇ ಸತ್ಯ ಹರಿಶ್ಚಂದ್ರ. ಪಾಪ.. ಸತ್ಯ ಹರಿಶ್ಚಂದ್ರ ಕಾಡಿಗೆ ಹೋಗಬೇಕಾದರೆ ಸಿದ್ದರಾಮಯ್ಯನಹುಂಡಿ ಮೇಲೆ ಹೋಗಿರಬೇಕು. ಅದಕ್ಕೆ ಸಿದ್ದರಾಮಯ್ಯ ಹೀಗೆ ಹೇಳುತ್ತಿರಬಹುದು ಎಂದು ಲೇವಡಿ ಮಾಡಿದರು.

2028ರ ಕುನಾವಣೆ ತುಂಬಾ ದೂರಾ ಇದೆ. ತೇಜಸ್ವಿ ಯಾದವ್ ಬಿಹಾರದಲ್ಲಿ ಪ್ರಮಾಣವಚನ ದಿನಾಂಕವನ್ನೇ ನಿಗದಿ ಮಾಡಿದ್ದರು. ಆದರೆ, ಅಲ್ಲಿ ಏನು ಆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಅನಗತ್ಯ ಜಾತಿ ಧರ್ಮವನ್ನು ಎಳೆದುತಂದು ಜನರನ್ನು ಪರಸ್ವರ ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ. ಇದು ಆಗಬಾರದು. ಒಕ್ಕಲಿಗ, ಕುರುಬರ ಮತ್ತು ಇತರ ಸಮಾಜದ ಸ್ವಾಮೀಜಿಗಳ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯ. ಧರ್ಮ ಸಂಘರ್ಷ ಮಾಡಬಾರದು ಎಂದು ಸಚಿವರು ಹೇಳಿದರು.

ಎಲ್ಲಾ ರೀತಿಯಲ್ಲಿಯೂ ಕಾಂಗ್ರೆಸ್ ರಾಜ್ಯದಲ್ಲಿ ವಿಫಲವಾಗಿದೆ. ಜನರ ಪರವಾಗಿ ದನಿಯೆತ್ತಲಿಕ್ಕಾಗಿಯೇ ನಾವು ಇಲ್ಲಿ ಸಭೆ ಸೇರಿದ್ದೇವೆ. ಡಿ.8ರಿಂದ ಬೆಳಗಾವಿ ಅಧಿವೇಶನ ನಡೆಯುತ್ತದೆ. ಎರಡು ಪಕ್ಷಗಳು ಪರಿಣಾಮಕಾರಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿವೆ. ಬೆಂಗಳೂರಿನಿಂದ ಶಾಸಕರು ಕಾಟಾಚಾರಕ್ಕೆ ಬರುತ್ತಾರೆ ಎನ್ನುವ ಅಭಿಪ್ರಾಯ ಬೇಡ. ಉತ್ತರ ಕರ್ನಾಟಕದ ಜನ ಕಷ್ಟದಲ್ಲಿದ್ದಾರೆ. ನೆರೆ ಬಂದು ಅನೇಕ ಜಿಲ್ಲೆಗಳ ಜನರು ಕಷ್ಟಕ್ಕೆ ಸಿಲುಕಿದ್ದರು. ಆಸ್ತಿ, ಮನೆಮಠ ಕಳೆದುಕೊಂಡ ಜನರ ನೆರವಿಗೆ ರಾಜ್ಯ ಸರ್ಕಾರ ಬಂದಿಲ್ಲ. ಕೇವಲ ಕೇಂದ್ರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದೆ. ತುಂಗಭದ್ರಾ ನೀರು ಬಳಕೆ ಮಾಡುವ ರೈತರಿಗೆ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ ಎಂದು ಹೇಳುತ್ತಿದೆ ಸರ್ಕಾರ. ಈ ವಿಷಯವನ್ನು ಎರಡು ಪಕ್ಷಗಳ ಶಾಸಕರು ಸದನದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ಪೊಲೀಸರೇ ದರೋಡೆ ಮಾಡುತ್ತಾರೆ!
ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಕೆಲ ಪೊಲೀಸರೇ ದರೋಡೆ ಸೇರಿ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುತ್ತಾರೆ. ಹಿಂದೆ ಅವರು ಐದು ವರ್ಷ ಸಿಎಂ ಆಗಿದ್ದಾಗ ಮೈಸೂರಿನ ಬಿಳಿಕೆರೆಯಲ್ಲಿ ಬಸ್ಸಿನಲ್ಲಿ ಹಣವನ್ನು ದೋಚಲಾಗಿತ್ತು. ಆ ಪ್ರಕರಣದಲ್ಲಿಯೂ ಪೊಲೀಸ್ ಅಧಿಕಾರಿಯೊಬ್ಬ ಭಾಗಿಯಾಗಿದ್ದ. ಇತ್ತೀಚೆಗೆ ಎಟಿಎಂ ಹಣ ದರೋಡೆ ಮಾಡಿದ ಪ್ರಕರಣದಲ್ಲಿಯೂ ಪೊಲೀಸ್ ಒಬ್ಬ ಭಾಗಿ ಆಗಿದ್ದಾನೆ. ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದಾಗ ಮಾತ್ರವೇ ಯಾಕೆ ಹೀಗೆ ಆಗುತ್ತದೆ? ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಏನು ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಉಗ್ರರ ಕೈಗೆ ಸ್ಮಾರ್ಟ್‌ಫೋನ್ ಹೋಗುತ್ತಿದೆ. ಅದನ್ನು ಗೃಹ ಸಚಿವರು ಖುದ್ದು ಪರಿಶೀಲನೆ ಮಾಡಿದ್ದರು. ಇತ್ತೀಚೆಗೆ ಇನ್ನೊಬ್ಬ ಮಂತ್ರಿ ಜೈಲಿಗೆ ಭೇಟಿ ನೀಡಿದ್ದರು. ಅವರು ಕಾರಾಗೃಹದಲ್ಲಿ ಏನು ಪರಿಶೀಲನೆ ಮಾಡಿದರೋ ಗೊತ್ತಿಲ್ಲ. ಆದರೆ, ಅವರು ಭೇಟಿ ನೀಡಿದ ನಂತರ ಜೈಲಿನಲ್ಲಿ ಡಿಸ್ಟಿಲರಿಯೇ ನಡೆಯುತ್ತಿರುವುದು ಪತ್ತೆ ಆಯಿತು! ಅವರು ಏನು ತಪಾಸಣೆ ಮಾಡೋಕೆ ಹೋಗಿದ್ದರು? ಸ್ವತಃ ಅವರೇ ಜೈಲ್ ಡಿಸ್ಟಿಲರಿ ಡ್ರಿಂಕ್ಸ್ ಗುಣಮಟ್ಟ ಪರಿಶೀಲನೆ ಮಾಡೋಕೆ ಹೋಗಿದ್ದರಾ ಹೇಗೆ ಎಂದು ತರಾಟೆಗೆ ತೆಗೆದುಕೊಂಡರು.

TAGGED:h d kumaraswamyPower Sharing Rowಅಧಿಕಾರ ಹಂಚಿಕೆಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories
Daali Dhananjaya 1
ನನ್ನ ಆಹಾರ ನನ್ನ ಚಾಯ್ಸ್, ಸಮುದಾಯ ಎಳೆದು ತಂದಿದ್ದು ಬಹಳ ಬೇಜಾರಾಯ್ತು: ಡಾಲಿ ಧನಂಜಯ್
Bengaluru City Cinema Districts Karnataka Latest Main Post Sandalwood
Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories

You Might Also Like

CJ Roy 4
Bengaluru City

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ – ಅಶೋಕ್ ನಗರ ಪೊಲೀಸರಿಂದ ಯುಡಿಆರ್ ದಾಖಲು

Public TV
By Public TV
31 minutes ago
Laborers died in hosakote
Bengaluru Rural

ಅನುಮಾನಾಸ್ಪದ ರೀತಿಯಲ್ಲಿ 4 ಮಂದಿ ಕೂಲಿ ಕಾರ್ಮಿಕರು ಸಾವು

Public TV
By Public TV
41 minutes ago
CJ Roy 1 1
Bengaluru City

ಸಿ.ಜೆ ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಅಂತ್ಯಕ್ರಿಯೆ

Public TV
By Public TV
1 hour ago
c.j.roy brother
Bengaluru City

ಯಾವುದೇ ಸಾಲವಿಲ್ಲ, ಶತ್ರುಗಳಿಲ್ಲ.. ಐಟಿ ಅಧಿಕಾರಿಗಳ ಒತ್ತಡ ಇತ್ತು: ಸಿಜೆ ರಾಯ್ ಬಗ್ಗೆ ಸಹೋದರ ಮಾತು

Public TV
By Public TV
2 hours ago
POLICE JEEP 1
Crime

ಶಾಲೆಯಲ್ಲಿ 1ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಿಕ್ಷಕ ಅರೆಸ್ಟ್‌

Public TV
By Public TV
2 hours ago
tiger image
Latest

ಕಾರವಾರ| ಹುಲಿ ಸಮೀಕ್ಷೆಗೆ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ ಕಳ್ಳತನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?