ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ (B.S Yediyurappa) ಆಗ್ರಹಿಸಿದ್ದಾರೆ.
ಇಂದು ಮಲ್ಲೇಶ್ವರದ (Malleshwara) ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ (Siddaramaiah) ಸರ್ಕಾರವು ಜನಪ್ರಿಯತೆ ಕಳೆದುಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರ್ಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಅಂತ ಸಭೆಯಲ್ಲಿ ಹೇಳಿದ್ದಾರೆ.
- Advertisement 2-
- Advertisement 3-
ಇನ್ನು ತಮ್ಮ ಜಿಲ್ಲಾ ಪ್ರವಾಸ ಬಗ್ಗೆ ಮಾತಾಡಿದ ಯಡಿಯೂರಪ್ಪ, ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ- ಡಿಸಿ, ಸಿಇಓಗಳಿಗೆ ಸಿಎಂ ಸೂಚನೆ
- Advertisement 4-
ಪದಾಧಿಕಾರಿಗಳ ಸಭೆ ಬಳಿಕ ಮಾತಾಡಿದ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್, ಎಸ್‍ಸಿ, ಎಸ್‍ಟಿ ಸಮುದಾಯದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಭೀಕರ ಬರಗಾಲ ಇದ್ದರೂ ಅದರ ಕಡೆಗೆ ಗಮನ ನೀಡುತ್ತಿಲ್ಲ ಎಂದು ಸಭೆಯಲ್ಲಿ ನಾಯಕರು ಆಕ್ಷೇಪಿಸಿದರು. ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿದರೆಂದು ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಾತನಾಡಿ, ಪಕ್ಷ ಸಂಘಟನೆಗೆ ಒತ್ತು ಕೊಡುವಂತೆ ಸಲಹೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಬರಗಾಲ, ಆಡಳಿತದಲ್ಲಿ ವೈಫಲ್ಯ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಅಸಮರ್ಪಕ ಆಡಳಿತ ವೈಖರಿ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ತಿಳಿಸಿದ್ದಾಗಿ ಎಂ.ಜಿ. ಮಹೇಶ್ ಅವರು ವಿವರ ನೀಡಿದ್ದಾರೆ.
Web Stories