ಬೆಂಗಳೂರು: ಬಸವರಾಜ್ ಹೊರಟ್ಟಿಗೆ ಸಚಿವ ಸ್ಥಾನ ಸಿಗಲ್ಲ ಎನ್ನುವ ಮಾಹಿತಿಯನ್ನು ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಲಿಂಗಾಯಿತ ಪ್ರಭಾವಿ ಸ್ವಾಮೀಜಿಗಳ ಬಳಿ ಹೇಳಿರೋದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಸ್ವಾಮೀಜಿಗಳ ಮೂಲಕ ಖಾತೆ ಸಿಗದ ಅತೃಪ್ತರ ಓಲೈಕೆಗೆ ಮುಂದಾಗಿದ್ದಾರಾ ಹೆಚ್‍ಡಿಕೆ ಅನ್ನೋ ಪ್ರಶ್ನೆಯೂ ಮೂಡಿದೆ.
Advertisement
ಲಿಂಗಾಯಿತ ಸಮುದಾಯದವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ, ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ದೂರವಾಣಿ ಕರೆಯೊಂದಕ್ಕೆ ಉತ್ತರಿಸಿ ಮಾತನಾಡಿದ ಸ್ವಾಮೀಜಿ, ಹೊರಟ್ಟಿಗೆ ಸಚಿವ ಸ್ಥಾನ ಕೊಡಲ್ಲ, ಈಗಾಗಲೇ ಅವರನ್ನು ಎಂಎಲ್‍ಸಿ ಮಾಡಿದ್ದೇವೆ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ. ಮೂರು ವರ್ಷ ಬಿಟ್ಟು ನೋಡೋಣ ಅಂದಿದ್ದಾರೆ. ಆಗಲೂ ಕೊಡದೇ ಇದ್ದರೆ ಗಲಾಟೆ ಮಾಡೋಣ ಅಂದಿದ್ದಾರೆ.
Advertisement
ಈ ಮೊಬೈಲ್ ಸಂಭಾಷಣೆ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು ಈ ಮಾತುಕತೆ ಸಾಕಷ್ಟು ಕುತೂಹಲವನ್ನು ಸೃಷ್ಟಿಸಿದೆ. ಇನ್ನು ಇದೇ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತಾನಾಡಿದ ಸ್ವಾಮೀಜಿ ಜೆಡಿಎಸ್ ಹಾಗೂ ಕಾಂಗ್ರೆಸ್‍ನಲ್ಲಿ ಒಟ್ಟು ಇಪ್ಪತ್ತು ಜನ ಲಿಂಗಾಯಿತ ಸಮುದಾಯದವರಿದ್ದು, ಹೆಚ್ಚು ಖಾತೆಯನ್ನು ಲಿಂಗಾಯಿತರಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನು ಓದಿ: ನಾನು ನಾಳೆ ಸಚಿವನಾಗಲ್ಲ: ಪರೋಕ್ಷವಾಗಿ ಅಸಮಾಧಾನ ಪ್ರಕಟಿಸಿದ ಹೊರಟ್ಟಿ